ETV Bharat / city

ರಾಜಕೀಯ ಕೆಸರೆರಚಾಟಕ್ಕೆ ವೇದಿಕೆಯಾದ ಶಿರಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ

author img

By

Published : Feb 24, 2021, 12:57 PM IST

ಶಿರಾದಲ್ಲಿ ಉದ್ಘಾಟನೆಗೊಂಡಿರುವ ತುಮಕೂರು ಜಿಲ್ಲೆಯ ಎರಡನೇ ಅತಿದೊಡ್ಡ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಇದೀಗ ರಾಜಕೀಯ ಕೆಸರೆರಚಾಟಕ್ಕೆ ವೇದಿಕೆ ಆಗಿದೆ.

ಶಿರಾ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ
ಶಿರಾ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ

ತುಮಕೂರು: ಜಿಲ್ಲಾ ಸರ್ಕಾರಿ ಆಸ್ಪತ್ರೆಯನ್ನು ಹೊರತುಪಡಿಸಿದರೆ ಜಿಲ್ಲೆಯಲ್ಲಿ ಅತಿದೊಡ್ಡ ಸರ್ಕಾರಿ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಶಿರಾ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆಗೊಂಡಿದ್ದು, ಇದು ಕಾಂಗ್ರೆಸ್, ಬಿಜೆಪಿ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಕ್ಕೆ ವೇದಿಕೆಯಾಗಿ ಪರಿವರ್ತನೆಗೊಂಡಿದೆ ಎನ್ನಲಾಗ್ತಿದೆ.

ರಾಜಕೀಯ ಕೆಸರೆರಚಾಟಕ್ಕೆ ವೇದಿಕೆಯಾದ ಶಿರಾದ ತಾಯಿ ಮತ್ತು ಮಕ್ಕಳ ಆಸ್ಪತ್ರೆ

ಸುಮಾರು 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಉದ್ಘಾಟನೆಗೊಂಡಿದೆ. ಇಲ್ಲಿ ನವಜಾತ ಶಿಶುಗಳ ಆರೈಕೆಗಾಗಿ ವಿಶೇಷ ಐಸಿಯು ಸೇವೆ, ಸ್ಕ್ಯಾನಿಂಗ್ ಸೇವಾ ಸೌಲಭ್ಯ, ಇ-ಆಸ್ಪತ್ರೆ, ನಿರಂತರ ವೈದ್ಯಕೀಯ ಸೇವೆ ಸೇರಿದಂತೆ ಅನೇಕ ಸೌಲಭ್ಯಗಳನ್ನು ಒದಗಿಸಲಾಗಿದೆ. ಜೊತೆಗೆ ಜಿಲ್ಲೆಯಲ್ಲಿಯೇ ಎರಡನೇ ದೊಡ್ಡ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಶಿರಾ ಶಾಸಕ ಡಾ. ರಾಜೇಶ್ ಗೌಡ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಶಾಸಕ ಟಿ.ಬಿ. ಜಯಚಂದ್ರ ಪ್ರತಿಕ್ರಿಯೆ ನೀಡಿದ್ದು, ಕೇವಲ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡವನ್ನು ಉದ್ಘಾಟನೆ ಮಾಡಿದರೆ ಸಾಲದು, ಅಗತ್ಯವಿರುವ ಸಿಬ್ಬಂದಿ ನಿಯೋಜನೆ ಮಾಡಬೇಕು. ಅದನ್ನು ಬಿಟ್ಟು ಕೇವಲ ಕಟ್ಟಡವನ್ನು ಉದ್ಘಾಟಿಸಿ, ಪ್ರಚಾರ ಗಿಟ್ಟಿಸಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಶಿರಾ ತಾಲೂಕು ಆಸ್ಪತ್ರೆಗೆ ಪರ್ಯಾಯವಾಗಿ ಈ ತಾಯಿ ಮತ್ತು ಮಕ್ಕಳ ಆಸ್ಪತ್ರೆ ತೆರೆಯಲಾಗಿದೆ. ಸುಮಾರು 66 ಸಿಬ್ಬಂದಿಯನ್ನು ನಿಯೋಜನೆ ಮಾಡಬೇಕಿದೆ. ಆದರೆ ಇದುವರೆಗೂ ಪೂರ್ವ ವೈದ್ಯರನ್ನು ಆಸ್ಪತ್ರೆಗೆ ನಿಯೋಜನೆ ಮಾಡಿಲ್ಲ. 100 ಬೆಡ್​ಗಳ ಆಸ್ಪತ್ರೆ ಎಂದು ಹೇಳಲಾಗಿದ್ದರೂ ಯಾವುದೇ ಹೊಸ ಹಾಸಿಗೆಗಳನ್ನು ಹಾಕಿಲ್ಲ. 40 ಹಾಸಿಗೆಗಳನ್ನು ಮಾತ್ರ ಆಸ್ಪತ್ರೆಯಲ್ಲಿ ಹಾಕಲಾಗಿದೆ. ಮೂಲಭೂತ ಸೌಕರ್ಯಗಳನ್ನು ಕಲ್ಪಿಸದೆ ಕೇವಲ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡವನ್ನು ಉದ್ಘಾಟನೆ ಮಾಡಿ ಪ್ರಚಾರ ಗಿಟ್ಟಿಸುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಟಿ.ಬಿ. ಜಯಚಂದ್ರ ಟೀಕಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.