ETV Bharat / city

ಶಿರಾ ನಗರಸಭೆ ಚುನಾವಣೆ ಫಲಿತಾಂಶ ಅತಂತ್ರ - ಸ್ಥಳೀಯ ಸಂಸ್ಥೆ ಚುನಾವಣೆ ಮತ ಎಣಿಕೆ

ಶಿರಾ ನಗರಸಭೆಯ 31 ವಾರ್ಡ್‌ಗಳ ಪೈಕಿ 30 ವಾರ್ಡ್​ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ- 11 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಜೆಡಿಎಸ್​ - 7 , ಬಿಜೆಪಿಯ ನಾಲ್ವರು ಹಾಗೂ ಎಂಟು ಮಂದಿ ಪಕ್ಷೇತರರು ಜಯಭೇರಿ ಬಾರಿಸಿದ್ದಾರೆ.

Shira municipal election result
ಶಿರಾ ನಗರಸಭೆ ಚುನಾವಣೆ ಫಲಿತಾಂಶ
author img

By

Published : Dec 30, 2021, 12:19 PM IST

ತುಮಕೂರು: ತೀವ್ರ ಕುತೂಹಲ ಕೆರಳಿಸಿದ್ದ ಶಿರಾ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದಾರೆ. ಇನ್ನೊಂದೆಡೆ, ಶಿರಾ ನಗರಸಭೆಯಲ್ಲಿ ಯಾವ ಪಕ್ಷಕ್ಕೂ ಪೂರ್ಣ ಬಹುಮತ ದೊರೆಯದೇ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ.

ನಗರಸಭೆಯ 31 ವಾರ್ಡ್‌ಗಳ ಪೈಕಿ 30 ವಾರ್ಡ್​ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ- 11 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಜೆಡಿಎಸ್​ - 7 ಅಭ್ಯರ್ಥಿಗಳು, ಬಿಜೆಪಿಯ ನಾಲ್ವರು ಹಾಗೂ ಎಂಟು ಮಂದಿ ಪಕ್ಷೇತರರು ಗೆಲುವು ಪಡೆದಿದ್ದಾರೆ.

ಶಿರಾ ನಗರಸಭೆ ಚುನಾವಣೆ ಫಲಿತಾಂಶ

ಚುನಾವಣೆಗೆ ಎರಡು ದಿನ ಬಾಕಿ ಇರುವಾಗ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯೊಬ್ಬರು ನಿಧನರಾದ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡಲಾಗಿತ್ತು. ಒಂದು ವರ್ಷದ ಹಿಂದಷ್ಟೇ ಶಿರಾ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿದ್ದರು. ಹೀಗಾಗಿ, ಕ್ಷೇತ್ರಾದ್ಯಂತ ಬಿಜೆಪಿಗೆ ಭಾರಿ ಬಹುಮತ ಬರಲಿದೆ ಎಂದು ಲೆಕ್ಕಾಚಾರ ಹಾಕಲಾಗಿದೆ. ಆದರೆ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿರುವುದು ಗಮನಾರ್ಹ ಅಂಶ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.