ತುಮಕೂರು: ಗಣೇಶ ಮೂರ್ತಿ ನಿಮಜ್ಜನೆಗೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ಕೆರೆಗೆ ಕಾಲು ಜಾರಿ ಬಿದ್ದು, ಅಣ್ಣ-ತಂಗಿ ಸಾವನಪ್ಪಿರುವ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಬ್ಯಾಲ್ಯಾ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ವಿದ್ಯಾರ್ಥಿ ದಿಲೀಪ್(11) ಹಾಗೂ ವಿದ್ಯಾರ್ಥಿನಿ ಆಶ್ವಿನಿ(8) ಕೆರೆಯ ಬಳಿ ಗಣೇಶ ಮೂರ್ತಿ ನಿಮಜ್ಜನೆಗೆ ಹೋಗಿದ್ದರು. ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಕೊಡಿಗೇನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲೇ ಮರಣೋತ್ತರ ನಡೆಸಿ ಪೋಷಕರಿಗೆ ಶವಗಳನ್ನು ಹಸ್ತಾಂತರಿಸಲಾಗಿದೆ.