ತುಮಕೂರು: ಸಿದ್ದಗಂಗಾ ಮಠದ ವತಿಯಿಂದ ಮುಂದಿನ ಶೈಕ್ಷಣಿಕ ವರ್ಷದಿಂದ ಆರಂಭವಾಗಲಿರುವ ಸಿದ್ದಗಂಗಾ ಮೆಡಿಕಲ್ ಕಾಲೇಜಿನಲ್ಲಿ ಉಕ್ರೇನ್ನಿಂದ ವಾಪಸ್ ತುಮಕೂರಿಗೆ ಬಂದಿರುವ 16 ಮಂದಿ ಮೆಡಿಕಲ್ ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾಭ್ಯಾಸ ಮುಂದುವರಿಸಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದ್ದಾರೆ.
ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೆಡಿಕಲ್ ವಿದ್ಯಾರ್ಥಿಗಳಿಗೆ ಈಗಾಗಲೇ ಆನ್ಲೈನ್ ಮೂಲಕ ಉಕ್ರೇನ್ನಿಂದ ಪಾಠಗಳನ್ನು ಮಾಡಲಾಗುತ್ತಿದೆ. ಪ್ರಾಯೋಗಿಕ ಅಭ್ಯಾಸಕ್ಕಾಗಿ ಸಿದ್ದಗಂಗಾ ಆಸ್ಪತ್ರೆಯಲ್ಲಿ ವ್ಯವಸ್ಥೆ ಕಲ್ಪಿಸಿ ಕೊಡಲಾಗಿದೆ ಎಂದು ತಿಳಿಸಿದ್ದಾರೆ.
ಉಕ್ರೇನ್ನಿಂದ ವಿದ್ಯಾಭ್ಯಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ ತುಮಕೂರಿಗೆ ಬಂದಿರುವ ಇನ್ನಷ್ಟು ಮೆಡಿಕಲ್ ವಿದ್ಯಾರ್ಥಿಗಳು ಪ್ರಾಯೋಗಿಕ ಅಭ್ಯಾಸಕ್ಕಾಗಿ ಆಸಕ್ತಿ ವಹಿಸಿ ಮುಂದೆ ಬಂದರೆ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು ಎಂದು ಸ್ವಾಮೀಜಿ ಭರವಸೆ ನೀಡಿದ್ದಾರೆ.
ಇದನ್ನೂ ಓದಿ: ಜೆಎಸ್ಎಸ್ ಮೆಡಿಕಲ್ ಕಾಲೇಜಿನಲ್ಲಿ ಉಕ್ರೇನ್ನಿಂದ ಬಂದ 511 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ: ಸುತ್ತೂರು ಶ್ರೀ