ತುಮಕೂರು: ಸಿದ್ದರಾಮಯ್ಯನವರು ಧರ್ಮ ಒಡೆಯುವ ಪ್ರಯತ್ನ ಮಾಡಿದ್ರು,. ಆದ್ರೆ ಅವರಿಂದ ಸಾಧ್ಯವಾಗಲಿಲ್ಲ. ಅದಕ್ಕೆ ಈಗ ಸುಮ್ಮನಾಗಿದ್ದಾರೆ ಎಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಟಾಂಗ್ ನೀಡಿದ್ದಾರೆ.
ಜಿಲ್ಲೆಯ ಗುಬ್ಬಿ ತಾಲೂಕಿನ ಹೇರೂರಿನಲ್ಲಿ ನಡೆದ ವೀರಶೈವ ಮಹಾಸಭಾದ ತಾಲೂಕು ಘಟಕದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಧರ್ಮವನ್ನು ಒಡೆಯುವ ಪ್ರಯತ್ನ ಮಾಡಲಾಗಿದೆ. ವೀರಶೈವ, ಲಿಂಗಾಯತರು ಒಂದೇ ನಾಣ್ಯದ ಎರಡು ಮುಖಗಳು. ಇದನ್ನು ನಾವೂ ಕೂಡ ಅನುಸರಿಸಿಕೊಂಡು ಬಂದಿದ್ದೇವೆ ಎಂದರು.