ತುಮಕೂರು: ಮಹತ್ವದ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳಲ್ಲಿ ಸ್ಥಳೀಯ ಯಾವುದೇ ಜನಪ್ರತಿನಿಧಿಗಳು ಹಸ್ತಕ್ಷೇಪ ಮಾಡುವಂತಿಲ್ಲ. ಕಾಮಗಾರಿಗಳನ್ನು ಕೈಗೆತ್ತಿಕೊಂಡ ಸ್ಮಾರ್ಟ್ ಸಿಟಿ ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಕ್ಯಾರೆ ಎನ್ನುತ್ತಿಲ್ಲ. ಇದು ಜನಪ್ರತಿನಿಧಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಇದನ್ನೂ ಓದಿ...ಸಾವಿನ ದವಡೆಯಲ್ಲಿರುವ ಈ ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ಪುನೀತ್!
ಇನ್ನೊಂದೆಡೆ ಕಾಮಗಾರಿಗಳು ಚಾಲ್ತಿಯಲ್ಲಿದ್ದರೂ ಸಾರ್ವಜನಿಕರ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಳ್ಳದೆ ಹಾಗೂ ಪರ್ಯಾಯ ಮಾರ್ಗಗಳನ್ನು ಕಲ್ಪಿಸುತ್ತಿಲ್ಲ. ಈ ಬಗ್ಗೆ ಜನಪ್ರತಿನಿಧಿಗಳು ಕೂಡ ಚಕಾರವೆತ್ತದ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ತೀವ್ರ ಇರಿಸುಮುರಿಸು ಉಂಟಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಸೇರಿ ಸ್ಥಳೀಯ ಶಾಸಕರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಆರಂಭವಾಗಿ ಸುಮಾರು ಎರಡು ವರ್ಷ ಕಳೆದರೂ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿಲ್ಲ. ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿಲ್ಲ. ಅಲ್ಲದೆ ಕಾಮಗಾರಿಗಳು ಕೂಡ ಜನಪ್ರತಿನಿಧಿಗಳ ನಿರೀಕ್ಷೆಯಂತೆ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳುತ್ತಿಲ್ಲ. ಹೀಗಾಗಿ ಅನಿವಾರ್ಯವಾಗಿ ಸ್ಮಾರ್ಟ್ ಸಿಟಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಮುಂದಾಗಿದ್ದಾರೆ.
ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ತಕ್ಷಣ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸಚಿವ ಮಾಧುಸ್ವಾಮಿ ಸೂಚಿಸಲು ನಿರ್ಧರಿಸಿದ್ದು, ಮುಂದಿನ ಎರಡು ವರ್ಷಗಳಲ್ಲಿ ಕಾಮಗಾರಿಗಳು ಪೂರ್ಣಗೊಳಿಸಲು ಯೋಜನೆ ರೂಪಿಸುತ್ತಿದ್ದಾರೆ.