ETV Bharat / city

ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಕಾಮಗಾರಿ: ಆಟೋ- ಬೈಕ್ ನಡುವೆ ಅಪಘಾತ

author img

By

Published : Jun 17, 2022, 9:07 AM IST

ಸ್ಮಾರ್ಟ್​ಸಿಟಿ ಯೋಜನೆಯಡಿ ನಿರ್ಮಿಸಿರುವ ಅವೈಜ್ಞಾನಿಕ ಛೇಂಬರ್​ನಿಂದಾಗಿ ಆಟೋ ಮತ್ತು ಬೈಕ್​ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.

Accident between auto and bike
ಆಟೋ ಮತ್ತು ಬೈಕ್ ನಡುವೆ ಅಪಘಾತ

ತುಮಕೂರು : ನಗರದ ಮಳೆ ಕೋಟೆ ಬಡಾವಣೆಯಲ್ಲಿ ಸ್ಮಾರ್ಟ್​ಸಿಟಿ ಯೋಜನೆ ಅಡಿ ನಡೆಸಲಾಗುತ್ತಿರುವ ಕಾಮಗಾರಿಯಿಂದ ರಸ್ತೆಯಲ್ಲಿರುವ ಛೇಂಬರ್​ಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಹಾಗೂ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

ಆಟೋ ಚಾಲಕ ಶಂರೇಜ್ ಅವರ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಆಸ್ಪತ್ರೆಯಲ್ಲಿ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ. ಬೈಕ್ ಸವಾರರು ಕೂಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಆಟೋ ಚಾಲಕನನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಅಪಘಾತದ ಭೀಕರತೆಗೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ.

ಆಟೋ ಮತ್ತು ಬೈಕ್ ನಡುವೆ ಅಪಘಾತ

ಸ್ಮಾರ್ಟ್​ಸಿಟಿ ಯೋಜನೆಯಲ್ಲಿ ನಡುರಸ್ತೆಯಲ್ಲಿ ಮಾಡಿರುವ ಅವೈಜ್ಞಾನಿಕ ಛೇಂಬರ್​ನಿಂದ ಈ ಅಪಘಾತ ಸಂಭವಿಸಿದೆ. ಈ ಕಾಮಗಾರಿಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ತುಮಕೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ವಿಜಯಪುರ: ಲಾರಿ-ಸರ್ಕಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿ, ಇಬ್ಬರು ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.