ETV Bharat / city

ತುಮಕೂರಲ್ಲಿ ಮೃತದೇಹಕ್ಕೆ ವೈದ್ಯಕೀಯ ವಿದ್ಯಾರ್ಥಿಗಳಿಂದ ಹೂವಿನ ಹಾರ ಹಾಕಿ ಪೂಜೆ! - undefined

ಬೆಳಗಾವಿ ಹಾರೋಗೇರಿ ಪಟ್ಟಣದಿಂದ ತರಿಸಿಕೊಳ್ಳಲಾದ ವ್ಯಕ್ತಿಯೊಬ್ಬರ ಮೃತದೇಹಕ್ಕೆ  ಶ್ರೀದೇವಿ ಮೆಡಿಕಲ್ ಕಾಲೇಜಿನ  ವಿದ್ಯಾರ್ಥಿಗಳು ಹೂವಿನ ಹಾರ ಹಾಕಿ ಪೂಜೆ ಸಲ್ಲಿಸಿದರು.

ಶ್ರೀದೇವಿ ಮೆಡಿಕಲ್ ಕಾಲೇಜ್​
author img

By

Published : Jul 25, 2019, 5:31 AM IST

ತುಮಕೂರು: ಅಧ್ಯಯನದ ಉದ್ದೇಶದಿಂದ ತರಿಸಿಕೊಳ್ಳಲಾದ ಮೃತದೇಹಕ್ಕೆ ವೈದ್ಯಕೀಯ ವಿದ್ಯಾರ್ಥಿಗಳು ಹಾರ ಹಾಕಿ ವಿಶೇಷವಾಗಿ ಬರಮಾಡಿಕೊಂಡ ಘಟನೆ ತುಮಕೂರಿನ ಶ್ರೀದೇವಿ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.

ಬೆಳಗಾವಿ ಹಾರೋಗೇರಿ ಪಟ್ಟಣದಿಂದ ತರಿಸಿಕೊಳ್ಳಲಾದ ವ್ಯಕ್ತಿಯೊಬ್ಬರ ಮೃತದೇಹಕ್ಕೆ ಶ್ರೀದೇವಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಹೂವಿನ ಹಾರ ಹಾಕಿ ಪೂಜೆ ಸಲ್ಲಿಸಿದರು.

ಮೃತದೇಹಕ್ಕೆ ವಿದ್ಯಾರ್ಥಿಗಳಿಂದ ಪೂಜೆ

ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ನಿವಾಸಿ ಹಣಮಂತ ಸಿದ್ದಪ್ಪ ಬೀರಾದಾರ ಪಾಟೀಲ (76) ಎಂಬುವರು ಇತ್ತೀಚೆಗೆ ಅನಾರೋಗ್ಯದಿಂದ ನಿಧನರಾಗಿದ್ದರು. ಶ್ರೀದೇವಿ ಮೆಡಿಕಲ್ ಕಾಲೇಜು ಆಡಳಿತ ಮಂಡಳಿಯ ಮನವಿಯಂತೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಎಸ್.ಜಿ.ವಿ. ಆಯುರ್ವೇದಿಕ್ ಮೆಡಿಕಲ್ ಕಾಲೇಜ್, ಡಾ. ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ಹಾಗೂ ಹಾರೂಗೇರಿಯ ಶರಣ ವಿಚಾರ ವಾಹಿನಿಯ ಮುಖಾಂತರ ಪಾಟೀಲರ ಮೃತದೇಹವನ್ನು ತರಿಸಿಕೊಳ್ಳಲಾಯಿತು.

Tumkur
ಹಣಮಂತ ಸಿದ್ದಪ್ಪ ಬೀರಾದಾರ ಪಾಟೀಲ

ಮೃತದೇಹ ಕಾಲೇಜು ಪ್ರವೇಶಿಸುತ್ತಿದ್ದಂತೆ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಧನ್ವಂತರಿ ಧ್ಯಾನದೊಂದಿಗೆ ಪೂಜೆ ಸಲ್ಲಿಸಿದ್ರು. ಪಾರ್ಥಿವ ಶರೀರಕ್ಕೆ ಕೈ ಮುಗಿದು, ನಮನ ಸಲ್ಲಿಸಿದ ಬಳಿಕ ಶರೀರ ರಚನಾ ವಿಭಾಗಕ್ಕೆ ಗೌರವಪೂರ್ವಕವಾಗಿ ಸಾಗಿಸಲಾಯ್ತು.

ಮೃತಪಟ್ಟ ನಂತರ ತನ್ನ ದೇಹವನ್ನು ವೈದ್ಯಕೀಯ ಅಧ್ಯಯನಕ್ಕಾಗಿ ದಾನ ಮಾಡಬೇಕೆಂಬ ಇಂಗಿತವನ್ನು ಹಣಮಂತ ಸಿದ್ದಪ್ಪ ಬಿರಾದಾರ್ ಪಾಟೀಲ್ ಅವರು ಬದುಕಿದ್ದಾಗಲೇ ವ್ಯಕ್ತಪಡಿಸಿದ್ದರು ಎಂದು ಡಾ. ರಾಮಣ್ಣ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ಮಹಾಂತೇಶ್ ರಾಮಣ್ಣ ಈಟಿವಿ ಭಾರತ್​​ಗೆ ತಿಳಿಸಿದರು.

Intro:ತುಮಕೂರುBody:ಬೆಳಗಾವಿಯಿಂದ ಬಂದ ಮೃತದೇಹಕ್ಕೆ ಕೈಮುಗಿದು ಬರಮಾಡಿಕೊಂಡ ತುಮಕೂರಿನ ವೈದ್ಯ ವಿದ್ಯಾರ್ಥಿಗಳು.......

ತುಮಕೂರು:
ನಗರದ ಶ್ರೀದೇವಿ ಮೆಡಿಕಲ್ ಕಾಲೇಜಿಗೆ ಅಧ್ಯಯನಕ್ಕಾಗಿ ದೂರದ ಬೆಳಗಾವಿ ಹಾರೋಗೇರಿ ಪಟ್ಟಣದಿಂದ ತರಿಸಿಕೊಳ್ಳಲಾದ ವ್ಯಕ್ತಿಯೊಬ್ಬರ ಮೃತದೇಹಕ್ಕೆ ಕೈಮುಗಿದು ಹೂವಿನ ಹಾರ ಹಾಕಿ ಬರಮಾಡಿಕೊಂಡಿದ್ದು ವಿಶೇಷವಾಗಿತ್ತು.
ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ನಿವಾಸಿ ಹಣಮಂತ ಸಿದ್ದಪ್ಪ ಬೀರಾದಾರ ಪಾಟೀಲ(76) ಇತ್ತೀಚೆಗೆ ಅನಾರೊಗ್ಯದಿಂದ ನಿಧನರಾಗಿದ್ದರು. ಶ್ರೀದೇವಿ ಮೆಡಿಕಲ್ ಕಾಲೇಜಿನ ಆಡಳಿತ ಮಂಡಳಿಯ ಮನವಿ ಮೇರೆಗೆ ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ ಕೇಳಲಾಗಿದ್ದ ಮೃತದೇಹವನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಎಸ್. ಜಿ. ವ್ಹಿ. ಆಯುರ್ವೇದಿಕ್ ಮೆಡಿಕಲ್ ಕಾಲೇಜ್, ಡಾ. ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ಹಾಗೂ ಹಾರೂಗೇರಿಯ ಶರಣ ವಿಚಾರವಾಹಿಣಿ ಮುಖಾಂತರ ಹಣಮಂತ ಸಿದ್ದಪ್ಪ ಬೀರಾದಾರ ಪಾಟೀಲ ಅವರ ಮೃತದೇಹವನ್ನು ಜುಲೈ 22ರಂದು ಕಾಲೇಜಿಗೆ ಕಳುಹಿಸಿಕೊಡಲಾಯಿತು. ಈ ಸಂದರ್ಭದಲ್ಲಿ ಗೌರವ ಭಾವನೆಯಿಂದ ಕಾಲೇಜಿನ ಸಿಬ್ಬಂದಿಗಳು ಮತ್ತು ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಪಾರ್ಥಿವ ಶರೀರಕ್ಕೆ ಪುಷ್ಪಗಳನ್ನು ಅರ್ಪಿಸಿ ಧನ್ವಂತರಿ ಸ್ಥವನದೊಂದಿಗೆ ಪೂಜೆ, ಪ್ರಾರ್ಥನೆ ಸಲ್ಲಿಸಿದ್ರು. ಶರೀರಕ್ಕೆ ಕೈಮುಗಿದು ಶರೀರ ರಚನಾ ವಿಭಾಗಕ್ಕೆ ಗೌರವಪೂರ್ವಕವಾಗಿ ದೇಹವನ್ನು ಸ್ವೀಕರಿಸಿದರು. ಪ್ರಸ್ತುತ ಶ್ರೀದೇವಿ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ ಕೇವಲ ನಾಲ್ಕು ಮೃತದೇಹಗಳಿವೆ ಹೀಗಾಗಿ ಹೆಚ್ಚಿನ ಮೃತದೇಹಗಳ ಅಗತ್ಯವಿದ್ದು ತಮಗೆ ಕಳಿಸಿಕೊಡುವಂತೆ ಕಾಲೇಜಿನ ಆಡಳಿತ ಮಂಡಳಿ ಮನವಿ ಮಾಡಿತ್ತು. ಇದನ್ನು ಪರಿಗಣಿಸಿದ ಬೆಳಗಾವಿ ಜಿಲ್ಲೆ ಬೈಲಹೊಂಗಲದ ಡಾ ರಾಮಣ್ಣ ಚಾರಿಟೇಬಲ್ ಟ್ರಸ್ಟ್ ಹಣಮಂತ ಸಿದ್ದಪ್ಪ ಬಿರಾದಾರ್ ಪಾಟೀಲ್ ಅವರ ಮೃತದೇಹವನ್ನು ಶ್ರೀದೇವಿ ಕಾಲೇಜಿಗೆ ಕಳಿಸಿಕೊಡುವಲ್ಲಿ ಪ್ರಮುಖ ಪಾತ್ರವಹಿಸಿತ್ತು.

ದೇಹವನ್ನು ವೈದ್ಯಕೀಯ ಅಧ್ಯನಕ್ಕಾಗಿ ದಾನ ಮಾಡಬೇಕೆಂಬ ಇಂಗಿತವನ್ನು ಜೀವಿತಾವಧಿಯಲ್ಲಿ ಹಣಮಂತ ಸಿದ್ದಪ್ಪ ಬಿರಾದಾರ್ ಪಾಟೀಲ್ ವ್ಯಕ್ತಪಡಿಸಿದ್ದರು. ದೇಹಕ್ಕೆ ಕೊಡುವ ಧಾರ್ಮಿಕ ಸಂಸ್ಕಾರಕ್ಕಿಂತಲೂ ದೇಹದಾನದಿಂದ ಮಾನವ ಕೋಟಿಗೆ ಆಗುವ ಸಂಶೋಧನೆಯ ಲಾಭ ಅತೀ ಶ್ರೆಷ್ಠ ಸಂಸ್ಕಾರವೆಂದು ಹಣಮಂತ ಸಿದ್ದಪ್ಪ ಬಿರಾದಾರ್ ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದರು ಎಂದು ಡಾ ರಾಮಣ್ಣ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಡಾ. ಮಹಾಂತೇಶ್ ರಾಮಣ್ಣ ಈಟಿವಿ ಭಾರತ್ ಗೆ ತಿಳಿಸಿದ್ದಾರೆ.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.