ತುಮಕೂರು: ಜಿಲ್ಲೆಯಲ್ಲಿ ನಡೆಯಲಿರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇ.80ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಬೇಕು ಎಂಬ ಉದ್ದೇಶವಿದ್ದು, ಇದಕ್ಕಾಗಿ ಸರ್ವ ತಯಾರಿ ನಡೆಸಲಾಗುತ್ತಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸುರೇಶ್ ಗೌಡ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ 3ರಂದು ತುಮಕೂರು ಜಿಲ್ಲೆಯ ಎರಡು ಕಡೆ ಸಮಾವೇಶಗಳನ್ನು ಆಯೋಜಿಸಲಾಗಿದೆ. ಈಶ್ವರಪ್ಪ ನೇತೃತ್ವದ ಬಿಜೆಪಿ ಮುಖಂಡರ ತಂಡವು ಸಮಾವೇಶದಲ್ಲಿ ಭಾಗವಹಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ತಿಳಿಸಲಿದೆ ಎಂದು ಹೇಳಿದರು.
ಕೆ.ಬಿ ಕ್ರಾಸ್ನಲ್ಲಿ ಒಂದು ಸಮಾವೇಶ ಮತ್ತು ಮಧುಗಿರಿಯಲ್ಲಿ ಮತ್ತೊಂದು ಸಮಾವೇಶವನ್ನು ಡಿಸೆಂಬರ್ 3ರಂದು ಆಯೋಜಿಸಲಾಗಿದೆ ಎಂದು ತಿಳಿಸಿದರು.