ತುಮಕೂರು: ಶಾಲಾ ಬಾಲಕ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ಪಟ್ಟಣದಲ್ಲಿ ನಡೆದಿದೆ.
ನವೀನ್ (11) ಮೃತ ವಿದ್ಯಾರ್ಥಿ.
ನವೀನ್ ಮಧುಗಿರಿ ಪಟ್ಟಣದ ಚೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ 5 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಸಂಜೆ 5 ಗಂಟೆ ಸುಮಾರಿಗೆ ಮನೆಗೆ ಬಂದಾಗ ತಲೆ ಸುತ್ತು ಬಂದು ಬಿದ್ದಿದ್ದಾನೆ. ಪೋಷಕರು ತಕ್ಷಣ ತಾಲೂಕ್ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ ಎಂಬ ಮಾಹಿತಿ ದೊರೆತಿದೆ.
ಮೃತ ಬಾಲಕನ ಪೋಷಕರು ಮಗನ ಸಾವಿಗೆ ಕಾರಣ ತಿಳಿಸುವಂತೆ ಶಾಲಾ ಸಿಬ್ಬಂದಿಯನ್ನು ಆಗ್ರಹಿಸಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವೇ ಸಾವಿನ ಬಗ್ಗೆ ಸತ್ಯಾಸತ್ಯತೆ ತಿಳಿಯಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಚಂದ್ರಿಕಾ ಪ್ರತಿಕ್ರಿಯಿಸಿದ್ದಾರೆ.