ETV Bharat / city

ಎಲ್ಲರಿಗೂ ಲ್ಯಾಪ್​ಟಾಪ್​ ವಿತರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಲ್ಯಾಪ್​​ಟಾಪ್ ವಿತರಿಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಕಚೇರಿಗೆ ನೂರಾರು ವಿದ್ಯಾರ್ಥಿಗಳು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

students protest against state government
ವಿದ್ಯಾರ್ಥಿಗಳಿಂದ ಪ್ರತಿಭಟನೆ
author img

By

Published : Jan 18, 2020, 5:13 AM IST

ಪಾವಗಡ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಲ್ಯಾಪ್​​ಟಾಪ್ ವಿತರಿಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಕಚೇರಿಗೆ ನೂರಾರು ವಿದ್ಯಾರ್ಥಿಗಳು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

2017ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಲ್ಯಾಪ್​​ಟಾಪ್ ವಿತರಿಸಿದ್ದರು. ನಂತರ 2018-19ನೇ ಸಾಲಿನಲ್ಲಿ ಯೋಜನೆ ಸ್ಥಗಿತಗೊಂಡಿತ್ತು. ಎಲ್ಲಾ ವಿದ್ಯಾರ್ಥಿಗಳನ್ನು ಸಮನಾಗಿ ಕಾಣಬೇಕು. ಎಲ್ಲಾ ವರ್ಗಗಳಲ್ಲೂ ಬಡ ವಿದ್ಯಾರ್ಥಿಗಳಿದ್ದಾರೆ. ಕೇವಲ ಒಂದು ವರ್ಗಕ್ಕೆ ಲ್ಯಾಪ್​ಟಾಪ್​ ವಿತರಿಸಿ ಮತ್ತೊಂದು ವರ್ಗಕ್ಕೆ ಅನ್ಯಾಯ ಮಾಡಬಾರದು ಎಂದು ಪ್ರತಿಭಟನಾಕಾರರು ಬೇಸರ ವ್ಯಕ್ತಪಡಿಸಿದರು.

ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು

ತಹಶೀಲ್ದಾರ್​​ ವರದರಾಜು ಅವರಿಗೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು. ವರದರಾಜು ಮಾತನಾಡಿ, ನಿಮ್ಮ ಮನವಿಯನ್ನು ಜಿಲ್ಲಾಧಿಕಾರಿ ಮುಖಾಂತರ ರಾಜ್ಯ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು.

Intro:Body:ಪಾವಗಡ ಸುದ್ದಿಪಟ್ಟಿ

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಲ್ಲಾ ವರ್ದದ ವಿದ್ಯಾರ್ಥಿಗಳಿಗೆ ಲ್ಯಾಬ್ ಟಾಪ್ ವಿತರಣೆ ಮಾಡುವಂತೆ ಒತ್ತಾಯಿಸಿ ತಹಶಿಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಮನವಿ ಪತ್ರ ಸಲ್ಲಿಸಿದರು.

೨೦೧೭ ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯರವರು ಎಸ್.ಸಿ ಮತ್ತು ಎಸ್.ಟಿ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಲ್ಯಾಬ್ ಟಾಪ್ ವಿತರಣೆ ಮಾಡಿದ್ರು ನಂತರ ೧೮ ಮತ್ತು ೧೯ ನೇ ಸಾಲಿನಲ್ಲಿ ಯೋಜನೆ ಕಡಿತಗೋಂಡಿದ್ದು ೩೦೨೦ ನೇ ಸಾಲಿನಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಲ್ಯಾಬ್ ಟಾಪ್ ವಿತರಣೆ ಮಾಡುವಂತೆ ಒತ್ತಾಯಿಸಿ ಒಂದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಒಂದು ಗಂಟೆಗೂ ಹೆಚ್ಚು ಕಾಲ ತಹಶಿಲ್ದಾರ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಿದರು.

ಮನವಿ ಸ್ವೀರರಿಸಿ ಮಾತನಾಡಿದ ತಹಶಿಲ್ದಾರ್ ವರದರಾಜು ನಿಮ್ಮ ಮನವಿಯನ್ನು ಜಿಲ್ಲಾಧಿಕಾರಿ ಮುಖಾಂತರ ರಾಜ್ಯ ಸರ್ಕಾರಕ್ಕೆ ಕಳುಹಿಸಲಾಗುವುದೆಂದು ತಿಳಿಸಿದರು.

ತಹಶಿಲ್ದಾರ್ ವರದರಾಜು ಬೈಯಿಟ್ಸ್.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.