ತುಮಕೂರು: ರಾಜ್ಯದ ಕಾಂಗ್ರೆಸ್ಗೆ ಹತ್ತಾರು ಶಾಪಗಳಿವೆ. ಗಾಂಧಿ ಹೆಸರಲ್ಲಿ ವೋಟ್ ಪಡೆದು ಗಾಂಧಿ ಅವರಿಗೆ ಮೋಸ ಮಾಡಿದರು. ಅಂಬೇಡ್ಕರ್ ಹೆಸರಿನಲ್ಲಿ ಅಂಬೇಡ್ಕರ್ಗೆ ಮೋಸ ಮಾಡಿದರು. ಕಾಂಗ್ರೆಸ್ ಪಕ್ಷಕ್ಕೆ ದನ ಕರುವಿನ ಚಿಹ್ನೆ ಇಟ್ಟುಕೊಂಡು ಗೋವಿಗೆ ಅನ್ಯಾಯ ಮಾಡಿದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು.
ತುಮಕೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೃಷಿಕರಿಂದ ಮತ ಪಡೆದು ರೈತರಿಗೆ ಅನ್ಯಾಯ ಮಾಡಿದರು. ಈ ರೀತಿ ಹತ್ತಾರು ಶಾಪಗಳು ಕಾಂಗ್ರೆಸ್ಸಿಗೆ ತಟ್ಟಿವೆ. ರಾಜ್ಯದಲ್ಲೂ ಕಾಂಗ್ರೆಸ್ ನಾಯಕರ ಮೇಲೆ ಅದರ ಪರಿಣಾಮ ಆಗುತ್ತಿದೆ ಎಂದು ಟೀಕಿಸಿದರು.
ಮನ್ ಕಿ ಬಾತ್ ವೀಕ್ಷಣೆ: ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ನಗರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ವೀಕ್ಷಿಸಿದರು. ರಾಜ್ಯ ಕಾರ್ಯಕಾರಿಣಿ ರೈತಮೋರ್ಚಾ ಸಭೆಯಲ್ಲಿ ದೊಡ್ಡ ಪರದೆಯ ಮೇಲೆ ಮನ್ ಕಿ ಬಾತ್ ಕಾರ್ಯಕ್ರಮದ ನೇರಪ್ರಸಾರವನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ತುಮಕೂರು ಸಂಸದ ಬಸವರಾಜ್, ಶಾಸಕ ಜ್ಯೋತಿ ಗಣೇಶ್ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು ಹಾಜರಿದ್ದರು.
ಇದನ್ನೂ ಓದಿ: ಕಾಂಗ್ರೆಸ್ ದಲಿತರಿಗೆ ಸಿಎಂ ಆಗುವ ಅವಕಾಶ ಕೊಡುತ್ತೆ: ಸಿದ್ದರಾಮಯ್ಯ ಭೇಟಿ ಬಳಿಕ ಪರಮೇಶ್ವರ್ ಆಶಾಭಾವ