ETV Bharat / city

ರಾಜ್ಯದಲ್ಲಿ ಮೈತ್ರಿಯಿಂದ ಕಾಂಗ್ರೆಸ್​ಗೆ ಸಾಕಷ್ಟು ನಷ್ಟ : ಮಾಜಿ ಶಾಸಕ ಕೆ.ಎನ್. ರಾಜಣ್ಣ

author img

By

Published : Mar 23, 2019, 7:55 PM IST

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಒಂದು ರೀತಿ ದೊಡ್ಡ ಮೀನು ಸಣ್ಣ ಮೀನನ್ನು ತಿಂದು ಹಾಕಿದಂತೆ, ದೊಡ್ಡಗೌಡರಾದ ದೇವೇಗೌಡರು ಸಣ್ಣಗೌಡರಾಗಿರುವ ಮುದ್ದ ಹನುಮೇಗೌಡರನ್ನು ತಿನ್ನಲು ಬರುತ್ತಿದ್ದಾರೆ ಎಂದು ಮಾಜಿ ಶಾಸಕ ಕೆ. ಎನ್ ರಾಜಣ್ಣ ಟೀಕಿಸಿದ್ದಾರೆ.

ಕೆ.ಎನ್ ರಾಜಣ್ಣ
ತುಮಕೂರು: ದೇಶದಲ್ಲಿ ಕೋಮುವಾದಿಗಳನ್ನು ದೂರ ಇಡಬೇಕು ಮತ್ತು ಜಾತ್ಯಾತೀತ ವಾದಿಗಳು ಒಗ್ಗೂಡಬೇಕು ಎಂಬ ಉದ್ದೇಶದಿಂದ ರಾಜ್ಯದಲ್ಲಿ ಜೆಡಿಎಸ್ ಜೊತೆಗೆ ಕಾಂಗ್ರೆಸ್ ಚುನಾವಣಾ ಮೈತ್ರಿ ಮಾಡಿಕೊಂಡಿದೆ. ಆದರೆ, ಈ ಮೈತ್ರಿಯಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಸಾಕಷ್ಟು ನಷ್ಟ ಆಗುತ್ತಿದೆ. ಇದು ಲೋಕಸಭಾ ಚುನಾವಣೆ ನಂತರ ಬೆಳಕಿಗೆ ಬರಲಿದೆ ಎಂದು ಮಾಜಿ ಶಾಸಕ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.ತುಮಕೂರು ತಾಲೂಕು ಹೆಬ್ಬೂರು ಗ್ರಾಮದ ಸಂಸದ ಮುದ್ದಹನುಮೇಗೌಡ ಅವರ ತೋಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.ರಾಜ್ಯದಲ್ಲಿ ಮೈತ್ರಿ ಸರ್ಕಾರ ಮಾಡಿರುವುದು ಸರಿಯಲ್ಲ. ರಾಜ್ಯದ ಹೆಚ್ಚಿನ ಸಮಸ್ಯೆಗಳನ್ನು ಲೋಕಸಭೆಯಲ್ಲಿ ಪ್ರಸ್ತಾಪ ಮಾಡುತ್ತಿದ್ದವರು ತುಮಕೂರು ಲೋಕಸಭೆ ಕ್ಷೇತ್ರದ ಸಂಸದ ಮುದ್ದಹನುಮೇಗೌಡ. ಆದರೆ ಎಲ್ಲಾ ಹಾಲಿ ಕಾಂಗ್ರೆಸ್ ಸಂಸದರಿಗೆ ಟಿಕೆಟ್ ಕೊಟ್ಟು ಮುದ್ದ ಹನುಮೇಗೌಡರಿಗೆ ನಿರಾಕರಿಸಿರುವುದು ಸರಿಯಲ್ಲ ಎಂದು ಈಗಾಗಲೇ ಕಾಂಗ್ರೆಸ್ ಮುಖಂಡರಿಗೆ ಮನವರಿಕೆ ಆಗಿದೆ. ಇದನ್ನು ಕಾಂಗ್ರೆಸ್ ಪಕ್ಷ ಹೈಕಮಾಂಡ್​ಗೆ ಸರಿಯಾಗಿ ಮನವರಿಕೆ ಮಾಡಿಕೊಡದೇ ಇರುವುದರಿಂದ ಈ ರೀತಿಯಾದ ಒಂದು ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.ಹಾಸನ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ದೇವೇಗೌಡರಿಗೆ ಮೊಮ್ಮಕ್ಕಳ ಕಾಟ ಆಗಿದೆ. ಹೀಗಾಗಿ, ಅವರು ತುಮಕೂರು ಲೋಕಸಭಾ ಕ್ಷೇತ್ರದತ್ತ ಮುಖ ಮಾಡಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಐದು ಜನ ಕಾಂಗ್ರೆಸ್ ಶಾಸಕರಿದ್ದಾರೆ, ಇಬ್ಬರು ಜೆಡಿಎಸ್ ಶಾಸಕರಿದ್ದಾರೆ. ಹೀಗಿದ್ದರೂ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಒಂದು ರೀತಿ ದೊಡ್ಡ ಮೀನು ಸಣ್ಣ ಮೀನನ್ನು ತಿಂದು ಹಾಕಿದಂತೆ, ದೊಡ್ಡಗೌಡರಾದ ದೇವೇಗೌಡರು ಸಣ್ಣಗೌಡರಾಗಿರುವ ಮುದ್ದ ಹನುಮೇಗೌಡರನ್ನು ತಿನ್ನಲು ಬರುತ್ತಿದ್ದಾರೆ ಎಂದು ವ್ಯಾಖ್ಯಾನಿಸಿದರು.ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲಿನಿಂದಲೂ ಈ ಮೈತ್ರಿ ಬೇಡ ಎಂದು ಪ್ರತಿಪಾದನೆ ಮಾಡಿಕೊಂಡು ಬಂದಿದ್ದರು. ಅಲ್ಲದೆ ಸಂಸದ ಮುದ್ದಹನುಮೇಗೌಡರ ಪರವಾಗಿಯೇ ಇದ್ರು. ಜೆಡಿಎಸ್ ಕಾಂಗ್ರೆಸ್ ಮೈತ್ರಿ ಏನಿದ್ದರೂ ಲೋಕಸಭೆ ಚುನಾವಣೆವರೆಗೂ ಮಾತ್ರ ಈ ಬಗ್ಗೆ ಹೈಕಮಾಂಡ್ ಕೂಡ ಚಿಂತನೆ ನಡೆಸಲಿದೆ ಎಂದು ಹೇಳಿದರು.

Intro:ರಾಜ್ಯದಲ್ಲಿ ಮೈತ್ರಿಯಿಂದ ಕಾಂಗ್ರೆಸ್ ಗೆ ಸಾಕಷ್ಟು ನಷ್ಟ ಆಗುತ್ತಿದೆ.......
ಮಾಜಿ ಶಾಸಕ ಕೆ ಎನ್ ರಾಜಣ್ಣ ಅಳಲು.....

ತುಮಕೂರು
ದೇಶದಲ್ಲಿ ಕೋಮುವಾದಿಗಳನ್ನು ದೂರ ಇಡಬೇಕು ಮತ್ತು ಜಾತ್ಯತೀತ ವಾದಿಗಳು ಒಗ್ಗೂಡಬೇಕು ಎಂಬ ಉದ್ದೇಶದಿಂದ ರಾಜ್ಯದಲ್ಲಿ ಜೆಡಿಎಸ್ ಜೊತೆಗೆ ಕಾಂಗ್ರೆಸ್ ಚುನಾವಣಾ ಮೈತ್ರಿ ಮಾಡಿಕೊಂಡಿದೆ. ಇರಲಿ ಯಾವುದೇ ಪುರುಷಾರ್ಥಕ್ಕೆ ಅಲ್ಲ . ಈ ಮೈತ್ರಿಯಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಸಾಕಷ್ಟು ನಷ್ಟ ಆಗುತ್ತಿದೆ. ಅಲ್ಲದೆ ಇದು ಲೋಕಸಭಾ ಚುನಾವಣೆ ನಂತರ ಬೆಳಕಿಗೆ ಬರಲಿದೆ ಎಂದು ಮಾಜಿ ಶಾಸಕ ಕೆ ಎನ್ ರಾಜಣ್ಣ ತಿಳಿಸಿದ್ದಾರೆ
ತುಮಕೂರು ತಾಲ್ಲೂಕು ಹೆಬ್ಬೂರು ಗ್ರಾಮದ ಸಂಸದ ಮುದ್ದಹನುಮೇಗೌಡ ಅವರ ತೋಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೈತ್ರಿ ಸರ್ಕಾರ ಮಾಡಿರುವುದು ಸರಿಯಲ್ಲ ಎಂದು ಮತ್ತು ನಾವು ವಿರೋಧ ಪಕ್ಷದಲ್ಲಿ ಇರಬೇಕಾಗಿತ್ತು ಎಂದು ನಾನು ಹೇಳಿಕೊಂಡು ಬಂದಿದ್ದೇನೆ ಎಂದರು.

ರಾಜ್ಯದ ಹೆಚ್ಚಿನ ಸಮಸ್ಯೆಗಳನ್ನು ಲೋಕ ಸಭೆಯಲ್ಲಿ ಪ್ರಸ್ತಾಪ ಮಾಡುತ್ತಿದ್ದುದು ತುಮಕೂರು ಲೋಕಸಭೆ ಕ್ಷೇತ್ರದ ಸಂಸದ ಮುದ್ದಹನುಮೇಗೌಡ. ಆದರೆ ಎಲ್ಲಾ ಹಾಲಿ ಕಾಂಗ್ರೆಸ್ ಸಂಸದರಿಗೆ ಟಿಕೆಟ್ ಕೊಟ್ಟು ಮುದ್ದ ಹನುಮೇಗೌಡ ರಿಗೆ ನಿರಾಕರಿಸಿರುವುದು ಸರಿಯಲ್ಲ ಎಂದು ಈಗಾಗಲೇ ಕಾಂಗ್ರೆಸ್ ಮುಖಂಡರಿಗೆ ಮನವರಿಕೆ ಆಗಿದೆ. ಕಾಂಗ್ರೆಸ್ ಪಕ್ಷದ ಹೈಕಮಾಂಡಿಗೆ ಸರಿಯಾಗಿ ಮನವರಿಕೆ ಮಾಡಿಕೊಡದೇ ಇರುವುದರಿಂದ ಈ ರೀತಿಯಾದ ಒಂದು ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದರು.

ಹಾಸನ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ದೇವೇಗೌಡರಿಗೆ ಮೊಮ್ಮಕ್ಕಳ ಕಾಟ ಆಗಿದೆ ಹೀಗಾಗಿ, ಅವರು ತುಮಕೂರು ಲೋಕಸಭಾ ಕ್ಷೇತ್ರದತ್ತ ಮುಖ ಮಾಡಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಐದು ಜನ ಕಾಂಗ್ರೆಸ್ ಶಾಸಕರಿದ್ದಾರೆ ಇಬ್ಬರು ಜೆಡಿಎಸ್ ಶಾಸಕರಿದ್ದಾರೆ. ಹೀಗಿದ್ದರೂ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಒಂದು ರೀತಿ ದೊಡ್ಡ ಮೀನು ಸಣ್ಣ ಮೀನನ್ನು ತಿಂದು ಹಾಕಿದಂತೆ, ದೊಡ್ಡಗೌಡರಾದ ದೇವೇಗೌಡರು ಸಣ್ಣಗೌಡರಾಗಿರುವ ಮುದ್ದ ಹನುಮೇಗೌಡರನ್ನು ತಿನ್ನಲು ಬರುತ್ತಿದ್ದಾರೆ ಎಂದು ವ್ಯಾಖ್ಯಾನಿಸಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲಿನಿಂದಲೂ ಈ ಮೈತ್ರಿಯ ಬೇಡ ಎಂದು ಪ್ರತಿಪಾದನೆ ಮಾಡಿಕೊಂಡು ಬಂದಿದ್ದರು. ಅಲ್ಲದೆ ಸಂಸದ ಮುದ್ದಹನುಮೇಗೌಡರ ಪರವಾಗಿ ಯೇ ಇದ್ರು. ಜೆಡಿಎಸ್ ಕಾಂಗ್ರೆಸ್ ಮೈತ್ರಿ ಏನಿದ್ದರೂ ಲೋಕಸಭೆ ಚುನಾವಣೆ ವರೆಗೂ ಮಾತ್ರ ಈ ಬಗ್ಗೆ ಹೈಕಮಾಂಡ್ ಕೂಡ ಚಿಂತನೆ ನಡೆಸಲಿದೆ ಎಂದು ಹೇಳಿದರು.

Body:ದೇವೇಗೌಡರ ಕುಟುಂಬ ರಾಜಕಾರಣ ಒಂದು ರೀತಿ ಚೆನ್ನಮ್ಮ ದೇವೇಗೌಡರಿಗೂ ಕೂಡ ಅನ್ಯಾಯವಾಗಿದೆ ಎಂದು ಲೇವಡಿ ಮಾಡಿದ ಕೆಎನ್ ರಾಜಣ್ಣ , ಯಾವುದಾದರೂ ಒಂದು ಲೋಕಸಭಾ ಕ್ಷೇತ್ರದಲ್ಲಿ ಅವರಿಗೂ ಟಿಕೆಟ್ ಕೊಡಬೇಕಿದೆ ಎಂದು ಟೀಕಿಸಿದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.