ತುಮಕೂರು : ಜಿಲ್ಲೆಯ ಕೊರಟಗೆರೆ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಶಿಕ್ಷಕರೊಬ್ಬರು ಸೇರಿದಂತೆ 22 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ತಗುಲಿದೆ. ಶಾಲೆಗೆ ಒಂದು ವಾರ ಕಾಲ ರಜೆ ಘೋಷಿಸಲಾಗಿದೆ.
ಮೊದಲಿಗೆ ಓರ್ವ ವಿದ್ಯಾರ್ಥಿಗೆ ಸೋಂಕು ತಗುಲಿರುವುದು ಧೃಡಪಟ್ಟ ತಕ್ಷಣ ಇನ್ನುಳಿದಂತೆ ಶಾಲೆಯಲ್ಲಿದ್ದ ಇನ್ನೂರಕ್ಕೂ ಹೆಚ್ಚು ವಿದ್ಯಾರ್ಥಿನಿಯರನ್ನು ಪರೀಕ್ಷೆಗೆ ಒಳಪಡಿಸಲಾಯಿತು. ಅದರಲ್ಲಿ ಒಟ್ಟು 22 ವಿದ್ಯಾರ್ಥಿನಿಯರು ಹಾಗೂ ಓರ್ವ ಶಿಕ್ಷಕರಲ್ಲಿ ಸೋಂಕು ದೃಢಪಟ್ಟಿದೆ.
ತಕ್ಷಣ ಎಚ್ಚೆತ್ತುಕೊಂಡ ತಾಲೂಕು ಆಡಳಿತ, ಎಲ್ಲಾ ಸೋಂಕಿತರನ್ನು ಐಸೋಲೇಷನ್ ಮಾಡಿ ಶಾಲೆಗೆ ಒಂದು ವಾರ ಕಾಲ ರಜೆ ನೀಡಲಾಗಿದೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಮತ್ತೆ ಹೆಚ್ಚುತ್ತಿವೆ.
ಸರ್ಕಾರ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಿದೆ. ವೀಕೆಂಡ್ ಹಾಗೂ ನೈಟ್ ಕರ್ಫ್ಯೂ ಜಾರಿಗೊಳಿಸಿ, ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ.
(ಇದನ್ನೂ ಓದಿ: ಬಿಎಸ್ವೈ ಮೂಗಿಗೆ ತುಪ್ಪ ಸವರಿ, ಕಿವಿ ಮೇಲೆ ಹೂ ಇಟ್ಟು ಮನೇಲಿ ಕೂತಿದ್ದಾರೆ: ವಾಲ್ಮೀಕಿ ಶ್ರೀ ಗುಡುಗು)