ತುಮಕೂರು: ಎರಡು ಕಾರುಗಳ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಬಿದರೆಗುಡಿ ಬಳಿ ನಡೆದಿದೆ. ಮೃತರನ್ನು ಸ್ವಿಫ್ಟ್ ಕಾರಿನಲ್ಲಿದ್ದ ಸಿಎಸ್ ಪುರ ಗ್ರಾಮದ ರಾಜೇಶ್ (32) ಮತ್ತು ಬೆಲವತ್ತ ಗ್ರಾಮದ ವೆಂಕಟಾಚಲ(41) ಎಂದು ಗುರುತಿಸಲಾಗಿದೆ.
ಮತ್ತೊಂದು ಕಾರಿನಲ್ಲಿದ್ದ ಓರ್ವ ಪ್ರಯಾಣಿಕನ ಕಾಲು ಮುರಿದಿದೆ. ಗಾಯಗೊಂಡಿರುವ ಇನ್ನೂ ಮೂವರನ್ನು ತಿಪಟೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬೆಂಗಳೂರು ಸಿಟಿ ಮಾರ್ಕೆಟ್ ಮೇಲ್ಸೇತುವೆಯಲ್ಲಿ ಅಪಘಾತ : ಸಂಚಾರ ದಟ್ಟಣೆ