ETV Bharat / city

ನಿತ್ಯ 6 ಸಾವಿರ ಪರೀಕ್ಷೆ, ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು: ತುಮಕೂರು ಡಿಹೆಚ್​​​ಒ - Tumkur DHO Dr. Nagendrappa statement

ತುಮಕೂರು ಜಿಲ್ಲೆಯಲ್ಲಿ ನಿತ್ಯ 6 ಸಾವಿರ ಕೋವಿಡ್​​ ಪರೀಕ್ಷೆ ನಡೆಸಲಾಗುತ್ತಿದ್ದು, 1ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಪತ್ತೆಯಾಗುತ್ತಿದೆ ಎಂದು ಡಿಹೆಚ್​ಒ ಡಾ.ನಾಗೇಂದ್ರಪ್ಪ ತಿಳಿಸಿದ್ದಾರೆ.

DHO Dr. Nagendrappa
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ
author img

By

Published : Jan 18, 2022, 7:25 AM IST

ತುಮಕೂರು: ಬೆಂಗಳೂರು ಸಮೀಪ ಇರುವುದರಿಂದ ತುಮಕೂರು ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ತಿಳಿಸಿದ್ದಾರೆ.

ಕೋವಿಡ್ ಪರಿಸ್ಥಿತಿ ಕುರಿತು ಮಾತನಾಡಿದ ತುಮಕೂರು ಡಿಎಚ್​​​​​ಒ ಡಾ.ನಾಗೇಂದ್ರಪ್ಪ

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ನಿತ್ಯ 6 ಸಾವಿರ ಮಂದಿಗೆ ಕೋವಿಡ್​​ ಪರೀಕ್ಷೆ ನಡೆಸಲಾಗುತ್ತಿದೆ. ಜತೆಗೆ 24 ಗಂಟೆಯೊಳಗೆ ಪರೀಕ್ಷೆಯ ಫಲಿತಾಂಶವನ್ನು ನೀಡಲಾಗುತ್ತಿದೆ. ಕೊರೊನಾ ಸೋಂಕು ಪಾಸಿಟಿವ್ ಬಂದ ವ್ಯಕ್ತಿಗಳಿಗೆ ಮೆಡಿಕಲ್ ಕಿಟ್ ಸಹ ನೀಡಲಾಗುತ್ತಿದೆ ಎಂದರು.

ನಿತ್ಯ ಒಂದು ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಪತ್ತೆಯಾಗುತ್ತಿದೆ. ಭಾನುವಾರ ಒಂದೇ ದಿನ 1326 ಮಂದಿಗೆ ಸೋಂಕು ತಗುಲಿದೆ ಎಂದರು. ಇನ್ನು15 ರಿಂದ 18 ವರ್ಷದೊಳಗಿನ 55 ಸಾವಿರ ಮಕ್ಕಳಿಗೆ ವ್ಯಾಕ್ಸಿನ್ ನೀಡಲಾಗಿದೆ. 65 ಸಾವಿರ ಮಕ್ಕಳಿಗೆ ವ್ಯಾಕ್ಸಿನ್ ನೀಡುವ ಗುರಿ ಹೊಂದಲಾಗಿದೆ ಎಂದು ಇದೇ ವೇಳೆ, ಅವರು ತಿಳಿಸಿದರು.

ಇದನ್ನೂ ಓದಿ: ಚೀನಾದಲ್ಲಿ ಸತತ 5ನೇ ವರ್ಷವೂ ಜನನ ಪ್ರಮಾಣ ಕುಸಿತ: 2021ರಲ್ಲಿ ಹುಟ್ಟಿದ್ದು ಕೇವಲ 4.80 ಲಕ್ಷ ಮಂದಿ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.