ETV Bharat / city

ಗ್ಯಾಸ್​ ಏಜೆನ್ಸಿಗೆ ಅಗತ್ಯ ಆಕ್ಸಿಜನ್ ಸರಬರಾಜು ಮಾಡುವಂತೆ ಡಿಸಿ ಸೂಚನೆ

ತುಮಕೂರಿನ ಅಮೋಘ ಗ್ಯಾಸ್ ಏಜೆನ್ಸಿಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಭೇಟಿ ನೀಡಿ ಸೋಂಕಿತರಿಗೆ ಅಗತ್ಯವಿರುವ ಆಕ್ಸಿಜನ್ ಸರಬರಾಜು ಮಾಡುವಂತೆ ಸೂಚಿಸಿದ್ದಾರೆ.

author img

By

Published : Apr 26, 2021, 9:00 PM IST

tumkur
tumkur

ತುಮಕೂರು: ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆ ಮಾಡುತ್ತಿರುವ ಹಿರೇಹಳ್ಳಿ ಕೈಗಾರಿಕೆ ಪ್ರದೇಶದಲ್ಲಿರುವ ಅಮೋಘ ಗ್ಯಾಸ್ ಏಜೆನ್ಸಿಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳು ಹಾಗೂ ಸರ್ಕಾರಿ ಆಸ್ಪತ್ರೆಗೆ ಪ್ರಸ್ತುತ ಕೊರೊನಾ ಸೋಂಕಿತರಿಗೆ ಅಗತ್ಯವಿರುವ ಆಕ್ಸಿಜನ್ ಪೂರಕವಾಗಿ ಸರಬರಾಜು ಮಾಡುವಂತೆ ಗ್ಯಾಸ್ ಏಜೆನ್ಸಿ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಆಕ್ಸಿಜನ್ ಸಂಗ್ರಹಿಸುವ ಸಂದರ್ಭದಲ್ಲಿ ಹಾಗೂ ಸಾಗಿಸುವ ಸಂದರ್ಭದಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ತೆಗೆದುಕೊಂಡಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಖುದ್ದು ಪರಿಶೀಲನೆ ನಡೆಸಿದರು. ಜಿಲ್ಲಾಡಳಿತದ ಸೂಚನೆಯನ್ನು ಚಾಚೂ ತಪ್ಪದೇ ಪಾಲಿಸಬೇಕು, ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ಅಜಯ್, ಡಿಹೆಚ್ಒ ಡಾ.ನಾಗೇಂದ್ರಪ್ಪ ಎಂ.ಬಿ. ಸಹಾಯಕ ಔಷಧ ನಿಯಂತ್ರಕಿ ಮಮತಾ ಮತ್ತಿತರರು ಹಾಜರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.