ETV Bharat / city

ಕೋವಿಡ್ ನಿರ್ಮೂಲನೆ ಜೊತೆಗೆ ನಗರದ ಅಭಿವೃದ್ಧಿ ಕಡೆಗೂ ಗಮನಹರಿಸಿ: ಪಾಲಿಕೆ ಸದಸ್ಯರ ಒತ್ತಾಯ

author img

By

Published : May 28, 2021, 9:07 AM IST

ಕೊರೊನಾ ಹಿನ್ನೆಲೆಯಲ್ಲಿ ಗೂಗಲ್ ಮೀಟ್ ಆ್ಯಪ್ ಮೂಲಕ ತುಮಕೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಪಾಲಿಕೆ ಸದಸ್ಯರು, ಕೋವಿಡ್ ನಿರ್ಮೂಲನೆಗೆ ನಗರದ ಅಭಿವೃದ್ಧಿ ಕಡೆಗೂ ಗಮನಹರಿಸಬೇಕು ಎಂದು ಒತ್ತಾಯಿಸಿದರು.

tumkur
ತುಮಕೂರು ಪಾಲಿಕೆ ಸಾಮಾನ್ಯ ಸಭೆ

ತುಮಕೂರು: ಕೋವಿಡ್ ನಿಯಂತ್ರಣದ ಜವಾಬ್ದಾರಿ ಜೊತೆಗೆ ನಗರದ ಅಭಿವೃದ್ಧಿ ಕಾರ್ಯಗಳಿಗೂ ಆದ್ಯತೆ ನೀಡಬೇಕು. ಪಾಲಿಕೆಯ ಎಲ್ಲಾ ವಾರ್ಡ್​ಗಳಿಗೂ ಸಮಾನವಾಗಿ ಅಭಿವೃದ್ಧಿ ಅನುದಾನ ನೀಡಬೇಕು. ಕೋವಿಡ್ ಸಂಕಷ್ಟದಲ್ಲಿರುವ ಬಡ ಕುಟುಂಬಗಳಿಗೆ ನೆರವಾಗಿ ದಿನಸಿ ಕಿಟ್ ವಿತರಣೆ ಮಾಡಬೇಕು ಎಂದು ತುಮಕೂರು ಪಾಲಿಕೆ ಸದಸ್ಯರು ಒಮ್ಮತದಿಂದ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಕೊರೊನಾ ಹಿನ್ನೆಲೆಯಲ್ಲಿ ಗೂಗಲ್ ಮೀಟ್ ಆ್ಯಪ್ ಮೂಲಕ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಪಾಲಿಕೆ ಸದಸ್ಯರು, ಕೋವಿಡ್ ನಿರ್ಮೂಲನೆಗೆ ಹೆಚ್ಚು ಒತ್ತು ಕೊಡಬೇಕು. ಇದರ ಜೊತೆಯಲ್ಲಿಯೇ ಅಭಿವೃದ್ಧಿ ಕಡೆಗೂ ಗಮನಹರಿಸಬೇಕು ಎಂದು ಒತ್ತಾಯಿಸಿದರು.

ಸಂಸದ ಜಿ.ಎಸ್.ಬಸವರಾಜು ಮಾತನಾಡಿ, ನಗರದಲ್ಲಿ ಕೋವಿಡ್ ನಿರ್ವಹಣೆ ಮತ್ತಷ್ಟು ಸಮರ್ಪಕವಾಗಿ ನಡೆಯಬೇಕು. ಕನಿಷ್ಠ ಮೂರು ವಾರ್ಡ್​ಗಳಲ್ಲಿ ಆರೈಕೆ ಕೇಂದ್ರ ಆರಂಭಿಸಿ ಸೋಂಕಿತರಿಗೆ ಆರೈಕೆ ಕೇಂದ್ರಲ್ಲಿಯೇ ಚಿಕಿತ್ಸೆ ನೀಡಬೇಕು. ಬಡವರ ಹಸಿವು ನೀಗಿಸುವ ಇಂದಿರಾ ಕ್ಯಾಂಟೀನ್​​ಗಳ ನಿರ್ವಹಣೆಯೂ ಸಮರ್ಪಕವಾಗಿ ನಡೆಯಬೇಕು ಎಂದು ಪಾಲಿಕೆ ಆಯುಕ್ತೆ ರೇಣುಕಾ ಅವರಿಗೆ ಸೂಚಿಸಿದರು.

ಕೋವಿಡ್ ಹಿನ್ನೆಲೆಯಲ್ಲಿ ನಗರದ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆ ಕಂಡುಬರುತ್ತಿದೆ. ಈಗಾಗಲೇ ಹಲವು ಕಡೆ ಬಗ್ಗಡದ ನೀರು ಬರುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ ಎಂದು ಸದಸ್ಯರು ಸಭೆಯ ಗಮನಕ್ಕೆ ತಂದರು. ಈ ವೇಳೆ ಮೇಯರ್ ಬಿ.ಜಿ.ಕೃಷ್ಣಪ್ಪ ಮಾತನಾಡಿ, ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಜಲ ಸಂಗ್ರಹಗಾರದಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಹಾಗಾಗಿ ಸಾರ್ವಜನಿಕರು ನೀರನ್ನು ಮಿತವಾಗಿ ಬಳಕೆ ಮಾಡಬೇಕು. ಈಗಾಗಲೇ ಗೋರೂರು ಡ್ಯಾಂನಿಂದ ಜಿಲ್ಲೆಗೆ ನೀರು ಹರಿಸುವ ವ್ಯವಸ್ಥೆ ಮಾಡಲಾಗಿದೆ. ಕೆಲವೇ ದಿನಗಳಲ್ಲಿ ನೀರು ನಗರದ ಬುಗುಡನಹಳ್ಳಿ ಜಲ ಸಂಗ್ರಹಗಾರಕ್ಕೆ ಬಂದು ಸೇರಲಿದೆ ಎಂದರು.

ಕೋವಿಡ್-19 ಸಂಕಷ್ಟದ ಹಿನ್ನೆಲೆಯಲ್ಲಿ ಬಿಬಿಎಂಪಿ ಮಾದರಿಯಲ್ಲಿ ನಗರದಲ್ಲಿನ ಬಡವರನ್ನು ಗುರುತಿಸಿ ದಿನಸಿ ಕಿಟ್ ವಿತರಣೆ ಮಾಡಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದ ಏಳನೇ ವಾರ್ಡಿನ ಸದಸ್ಯ ಕುಮಾರ್, ಸ್ಮಾರ್ಟ್ ಸಿಟಿ ಕಾಮಗಾರಿಗಳೂ ಸಹ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು. ಸ್ಮಾರ್ಟ್ ಸಿಟಿ ವ್ಯವಸ್ಥೆ ಅವ್ಯವಸ್ಥೆಯಾಗಿದೆ. ಸ್ಮಾರ್ಟ್ ಸಿಟಿ ಬಗ್ಗೆ ಸಾರ್ವಜನಿಕರಲ್ಲಿ ಒಳ್ಳೆಯ ಅಭಿಪ್ರಾಯವಿಲ್ಲ. ಕೆಲಸ ಸಮರ್ಪಕವಾಗಿ ನಡೆಯುತ್ತಿಲ್ಲ. ಹೆಸರಿಗೆ ಮಾತ್ರ ಅಭಿವೃದ್ಧಿ ಹಣೆಪಟ್ಟಿ ಇದೆ. ಕಾಮಗಾರಿಗಳು ಸಮರ್ಪಕವಾಗಿ ನಡೆಸಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಸಭೆ ಆರಂಭಕ್ಕೂ ಮುನ್ನ ಪಾಲಿಕೆ ವಿರೋಧ ಪಕ್ಷದ ನಾಯಕರಾಗಿ ಏಳನೇ ವಾರ್ಡಿನ ಕಾಂಗ್ರೆಸ್ ಪಕ್ಷದ ಕುಮಾರ್ ಜೆ. ಆಯ್ಕೆಯಾದರು. ಈ ವೇಳೆ ಸಂಸದ ಜಿ.ಎಸ್.ಬಸವರಾಜು ಮಾತನಾಡಿ, ವಿರೋಧ ಪಕ್ಷದ ನಾಯಕರು ಟೀಕೆಗೆ ಮಾತ್ರ ಸೀಮಿತವಾಗಬಾರದು. ಸಾರ್ವಜನಿಕರ ಆಸ್ತಿಪಾಸ್ತಿ ರಕ್ಷಣೆಗೆ ಹೆಚ್ಚು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಓದಿ: ರಾಜಧಾನಿಯಲ್ಲಿ ಕೊರೊನಾ ಇಳಿಕೆ, ಆದ್ರೆ ಆಸ್ಪತ್ರೆಗೆ ದಾಖಲಾಗ್ತಿರುವ ಸಂಖ್ಯೆಯಲ್ಲಿ ಏರಿಕೆ? ಅಂಕಿ-ಅಂಶ ನೋಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.