ETV Bharat / city

88 ಅಪಘಾತ ವಲಯ ಗುರುತಿಸಿದ ತುಮಕೂರು ಪೊಲೀಸ್​​​ ಇಲಾಖೆ - 88 ಅಪಘಾತ ವಲಯ

ತುಮಕೂರು ಜಿಲ್ಲಾ ಪೊಲೀಸ್ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ 88 ಅಪಘಾತ ವಲಯಗಳನ್ನು ಗುರುತಿಸಿದ್ದು, ಅವುಗಳನ್ನು ಬ್ಲಾಕ್ ಸ್ಪಾಟ್​​ಗಳೆಂದು ಘೋಷಣೆ ಮಾಡಿದೆ. ಈ ಸ್ಥಳಗಳಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಲು ಯೋಜನೆಯೊಂದನ್ನು ಕೂಡ ಸಿದ್ಧಪಡಿಸುತ್ತಿದೆ.

88 ಬ್ಲಾಕ್ ಸ್ಪಾಟ್​​ಗಳನ್ನು ಗುರುತಿಸಿದ ತುಮಕೂರು ಪೊಲೀಸ್ ಇಲಾಖೆ
author img

By

Published : Sep 12, 2019, 11:43 PM IST

ತುಮಕೂರು: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ರಸ್ತೆ ಅಪಘಾತಗಳಿಗೆ ಕಡಿವಾಣ ಹಾಕಲು ಜಿಲ್ಲಾ ಪೊಲೀಸ್ ಇಲಾಖೆ ಸಮೀಕ್ಷೆಯೊಂದನ್ನು ನಡೆಸಿದ್ದು, ಅದರಲ್ಲಿ ಬರೋಬ್ಬರಿ 88 ಅಪಘಾತ ವಲಯಗಳನ್ನು ಗುರುತಿಸಿದೆ. ಅಲ್ಲದೇ ಅವುಗಳನ್ನು ಬ್ಲಾಕ್ ಸ್ಪಾಟ್​​ಗಳೆಂದು ಘೋಷಣೆ ಮಾಡಿದೆ.

ಬಹುತೇಕ ಉತ್ತರ ಕರ್ನಾಟಕ ಹಾಗೂ ಹಾಸನ, ಮಂಗಳೂರು ಭಾಗದಿಂದ ರಾಜಧಾನಿ ಬೆಂಗಳೂರು ತಲುಪಬೇಕೆಂದರೆ ತುಮಕೂರು ಜಿಲ್ಲೆಯನ್ನು ದಾಟಿ ಹೋಗಬೇಕು. ಜಿಲ್ಲೆಯಲ್ಲಿ ಕಳೆದ ವರ್ಷ 766 ಅಪಘಾತಗಳು ಸಂಭವಿಸಿದ್ದು, ಅನೇಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಕಳೆದ ಎಂಟು ತಿಂಗಳಿನಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ ನೇತೃತ್ವದಲ್ಲಿ ಜಿಲ್ಲಾದ್ಯಂತ ಸಮೀಕ್ಷೆ ಮಾಡಲಾಗಿದೆ. ಮೂರು ಬಾರಿ ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಭೆ ನಡೆಸಿ 88 ಬ್ಲಾಕ್ ಸ್ಪಾಟ್​​ಗಳನ್ನು ಗುರುತಿಸಲಾಗಿದೆ. ಅಪಘಾತಗಳು ನಡೆಯುವ 500 ಮೀಟರ್ ಸುತ್ತಳತೆಯನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ.

88 ಬ್ಲಾಕ್ ಸ್ಪಾಟ್​​ಗಳನ್ನು ಗುರುತಿಸಿದ ತುಮಕೂರು ಪೊಲೀಸ್ ಇಲಾಖೆ

ಹಾಸನ ಮತ್ತು ಮಂಗಳೂರು ಜಿಲ್ಲೆಯಿಂದ ಬೆಂಗಳೂರಿಗೆ ತೆರಳುವಂತಹ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಅತಿಹೆಚ್ಚು ಬ್ಲಾಕ್ ಸ್ಪಾಟ್​ಗಳನ್ನು ಗುರುತಿಸಲಾಗಿದೆ. ಅದೇ ರೀತಿ ಉತ್ತರ ಕರ್ನಾಟಕ ಭಾಗದಿಂದ ಬೆಂಗಳೂರು ತಲುಪುವಂತಹ ರಾಷ್ಟ್ರೀಯ ಹೆದ್ದಾರಿ 48ರಲ್ಲಿಯೂ ಅನೇಕ ಬ್ಲಾಕ್ ಸ್ಪಾಟ್​ಗಳನ್ನು ಗುರುತಿಸಲಾಗಿದೆ. ಈ ಪ್ರದೇಶಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ನಿರಂತರವಾಗಿ ಪೊಲೀಸರನ್ನು ರಾತ್ರಿ ಹಾಗೂ ಹಗಲು ವೇಳೆ ಪಾಟ್ರೋಲಿಂಗ್ ಮಾಡಲು ಸೂಚಿಸಲಾಗಿದೆ.

ಒಟ್ಟಾರೆ ತುಮಕೂರು ಜಿಲ್ಲೆಯಲ್ಲಿ ಅಪಘಾತಗಳಿಂದ ಸಾವು-ನೋವುಗಳಿಗೆ ತುತ್ತಾಗುತ್ತಿರುವ ಪ್ರಯಾಣಿಕರನ್ನು ಪಾರು ಮಾಡಲು ಜಿಲ್ಲಾ ಪೊಲೀಸ್ ಇಲಾಖೆ 88 ಬ್ಲಾಕ್ ಸ್ಪಾಟ್​​​​ಗಳಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಲು ಯೋಜನೆಯೊಂದನ್ನು ಸಿದ್ಧಪಡಿಸುತ್ತಿದೆ.

Intro:ಕಲ್ಪತರ ನಾಡಿನಲ್ಲಿವೆ 88 ಬ್ಲಾಕ್ ಸ್ಪಾಟ್ ಗಳು......

ತುಮಕೂರು
ಕಲ್ಪತರ ನಾಡು ತುಮಕೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ರಸ್ತೆ ಅಪಘಾತಗಳು ಹೆಚ್ಚುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ಜಿಲ್ಲಾ ಪೊಲೀಸ್ ಇಲಾಖೆ ಸಮೀಕ್ಷೆಯೊಂದನ್ನು ನಡೆಸಿದೆ. ಅದರಲ್ಲಿ ಬರೋಬ್ಬರಿ 88 ಅಪಘಾತ ವಲಯಗಳನ್ನು ಗುರುತಿಸಿದೆ.
ಅಂತಹ ಸ್ಥಳಗಳನ್ನು ಬ್ಲಾಕ್ ಸ್ಪಾಟ್ ಗಳೆಂದು ಪೊಲೀಸ್ ಇಲಾಖೆ ಘೋಷಣೆ ಮಾಡಿದೆ.

ಬಹುತೇಕ ಉತ್ತರ ಕರ್ನಾಟಕ ಭಾಗದಿಂದ ಹಾಗೂ ಹಾಸನ ಮಂಗಳೂರು ಭಾಗದಿಂದ ರಾಜಧಾನಿ ಬೆಂಗಳೂರು ತಲುಪಬೇಕೆಂದರೆ ತುಮಕೂರು ಜಿಲ್ಲೆಯನ್ನು ದಾಟಿ ಹೋಗಬೇಕು. ಹೀಗಾಗಿ ತುಮಕೂರು ಜಿಲ್ಲೆಯಲ್ಲಿರುವ ರಸ್ತೆ ಸಂಪರ್ಕವನ್ನು ಬಹುತೇಕ ಬಳಕೆ ಮಾಡಿಕೊಳ್ಳಲಾಗುತ್ತದೆ.
ಜಿಲ್ಲೆಯಲ್ಲಿ ಕಳೆದ ವರ್ಷ 766 ಅಪಘಾತ ಗಳಾಗಿದ್ದು ಸಾರ್ವಜನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಅಲ್ಲದೆ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ.

ಕಳೆದ ಎಂಟು ತಿಂಗಳಿನಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ ನೇತೃತ್ವದಲ್ಲಿ ಜಿಲ್ಲಾಧ್ಯಂತ ಸಮೀಕ್ಷೆ ಮಾಡಲಾಗಿದೆ. ಮೂರು ಬಾರಿ ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಭೆ ನಡೆಸಿ 88 ಬ್ಲಾಕ್ ಸ್ಪಾಟ್ ಗಳನ್ನು ಗುರುತಿಸಲಾಗಿದೆ. ಅಪಘಾತಗಳು ನಡೆಯುವ 500 ಮೀಟರ್ ಸುತ್ತಳತೆಯನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ.

ಹಾಸನ ಮತ್ತು ಮಂಗಳೂರು ಜಿಲ್ಲೆಯಿಂದ ಬೆಂಗಳೂರಿಗೆ ತೆರಳುವಂತಹ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಅತಿಹೆಚ್ಚು ಬ್ಲಾಕ್ ಸ್ಪಾಟ್ ಗಳನ್ನು ಗುರುತಿಸಲಾಗಿದೆ. ಹೆಚ್ಚಾಗಿ ಅಪಘಾತಗಳು ಸಂಭವಿಸುವ ವಲಯವಾಗಿದೆ.

ಅದೇ ರೀತಿ ಉತ್ತರ ಕರ್ನಾಟಕ ಭಾಗದಿಂದ ಬೆಂಗಳೂರು ತಲುಪುವಂತಹ ರಾಷ್ಟ್ರೀಯ ಹೆದ್ದಾರಿ 48 ರಲ್ಲಿಯೂ ಹೆಚ್ಚಾಗಿ ಬ್ಲಾಕ್ ಪಾಠಗಳನ್ನು ಗುರುತಿಸಲಾಗಿದೆ. ಈ ಪ್ರದೇಶಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ನಿರಂತರವಾಗಿ ಪೊಲೀಸರನ್ನು ರಾತ್ರಿ ವೇಳೆ ಹಾಗೂ ಹಗಲು ವೇಳೆಯಲ್ಲಿ ಪೆಟ್ರೋಲಿಂಗ್ ಮಾಡುತ್ತಿದ್ದಾರೆ.

ಒಟ್ಟಾರೆ ತುಮಕೂರು ಜಿಲ್ಲೆಯಲ್ಲಿ ಅಪಘಾತಗಳಿಂದ ಸಾವು-ನೋವುಗಳಿಗೆ ತುತ್ತಾಗುತ್ತಿರುವ ಪ್ರಯಾಣಿಕರನ್ನು ಪಾರು ಮಾಡಲು ಜಿಲ್ಲಾ ಪೊಲೀಸ್ ಇಲಾಖೆ 88 ಬ್ಲಾಕ್ ಸ್ಪಾಟ್ ಗಳಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಲು ಯೋಜನೆಯೊಂದನ್ನು ಸಿದ್ಧಪಡಿಸುತ್ತಿದೆ.

ಬೈಟ್: ವಂಶಿಕೃಷ್ಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

Body:ತುಮಕೂರು

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.