ETV Bharat / city

ತುಮಕೂರು: ಅತ್ಯಾಚಾರ-ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಇಬ್ಬರು ಅರೆಸ್ಟ್‌ - ತುಮಕೂರಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ

ಕೊರಟಗೆರೆ ಪಟ್ಟಣದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಗೆಳತಿಯ ಮನೆಗೆ ಪುಸ್ತಕ ತೆಗೆದುಕೊಂಡು ಹೋಗಲು ಬಂದಿದ್ದಳು. ಈ ವೇಳೆ ಆರೋಪಿಯು ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ.

tumkur rape case accused arrested
ತುಮಕೂರು ಅತ್ಯಾಚಾರ ಪ್ರಕರಣದ ಆರೋಪಿ ಬಂಧನ
author img

By

Published : Dec 9, 2021, 1:23 PM IST

ತುಮಕೂರು: ಕುಡಿಯುವ ನೀರಿನಲ್ಲಿ ಪ್ರಜ್ಞೆ ತಪ್ಪುವ ಔಷಧಿ ಬೆರೆಸಿಕೊಟ್ಟು ನಂತರ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿರುವ ಪ್ರಕರಣ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೊರಟಗೆರೆ ಪಟ್ಟಣದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಗೆಳತಿಯ ಮನೆಗೆ ಪುಸ್ತಕ ತೆಗೆದುಕೊಂಡು ಹೋಗಲು ಬಂದಿದ್ದಳು. ಈ ವೇಳೆ ಆರೋಪಿಯು ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ಅಲ್ಲದೇ, ಈ ವಿಷಯವನ್ನು ಯಾರಿಗೂ ಹೇಳದಂತೆ ಕೊಲೆ ಬೆದರಿಕೆ ಹಾಕಿದ್ದಾನೆಂದು ತಿಳಿದುಬಂದಿದೆ.

ಬಾಲಕಿ ಮನೆಯಲ್ಲಿರುವಾಗ ತೀವ್ರ ಅಸ್ವಸ್ಥಳಾದ ಹಿನ್ನೆಲೆಯಲ್ಲಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಈ ಸಂಬಂಧ ಕೊರಟಗೆರೆ ಪಟ್ಟಣದ ಅಸ್ಲಾಂ ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಪ್ರಕರಣದಲ್ಲಿ, ಇತ್ತೀಚೆಗೆ 16 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಮಿಡಿಗೇಶಿ ಪೊಲೀಸರು ಬಂಧಿಸಿದ್ದಾರೆ. ಹನುಮಂತರಾಯಪ್ಪ (24) ಬಂಧಿತ ಆರೋಪಿ. ಪೋಕ್ಸೊ ಕಾಯ್ದೆಯಡಿ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಸಿಡಿಪಿಒ ಅನಿತಾ ದೂರು ನೀಡಿದ್ದರು.

ಇದನ್ನೂ ಓದಿ: ಬಲವಂತದ ಮತಾಂತರ ಮಾಡುವವರಿಗೆ ನೀವೇಕೆ ಬಲ ತುಂಬುತ್ತಿದ್ದೀರಿ?: ಸಿದ್ದರಾಮಯ್ಯಗೆ ಬಿಜೆಪಿ ಪ್ರಶ್ನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.