ETV Bharat / city

ಮಹಿಳೆಗೆ ಖಾರದಪುಡಿ ಎರಚಿ ಮಾಂಗಲ್ಯಸರ ಕದಿಯಲು ಯತ್ನ: ಸರಗಳ್ಳರನ್ನು ಹಿಡಿದು ಥಳಿಸಿದ ಗ್ರಾಮಸ್ಥರು! - two chain snatchers arrested in tumkur

ಮಹಿಳೆಗೆ ಖಾರದಪುಡಿ ಎರಚಿ ಮಾಂಗಲ್ಯ ಸರ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಇಬ್ಬರನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

Chain snatchers arrested in Tumkur  Tumkur crime news  Chain snatchers catch by Locals in Tumkur  ಮಹಿಳೆಗೆ ಖಾರದಪುಡಿ ಎರಚಿ ಮಾಂಗಲ್ಯಸರ ಕದಿಯಲು ಯತ್ನ  ಸರಗಳ್ಳರನ್ನು ಹಿಡಿದು ಥಳಿಸಿದ ಗ್ರಾಮಸ್ಥರು  ಮಹಿಳೆಗೆ ಖಾರದಪುಡಿ ಎರಚಿ ಮಾಂಗಲ್ಯಸರ ಕದ್ದು ಪರಾರಿ  ದಂಡಿನಶಿವರ ಪೋಲೀಸ್ ಠಾಣೆ  ತುಮಕೂರು ಅಪರಾಧ ಸುದ್ದಿ
ಮಹಿಳೆಗೆ ಖಾರದಪುಡಿ ಎರಚಿ ಮಾಂಗಲ್ಯಸರ ಕದಿಯಲು ಯತ್ನ
author img

By

Published : Aug 9, 2022, 10:26 AM IST

ತುಮಕೂರು: ಮಹಿಳೆಗೆ ಖಾರದಪುಡಿ ಎರಚಿ ಮಾಂಗಲ್ಯ ಸರ ಕಳ್ಳತನ ಮಾಡಿ ಪರಾರಿಯಾಗಲು ಯತ್ನಿಸಿದ ಇಬ್ಬರು ಕಳ್ಳರನ್ನು ಗ್ರಾಮಸ್ಥರು ಹಿಡಿದು ಥಳಿಸಿ ಪೊಲೀಸರಿಗೊಪ್ಪಿಸಿದ ಘಟನೆ ತುರುವೇಕೆರೆಯಲ್ಲಿ ನಡೆದಿದೆ. ಮಹಿಳೆಯಿಂದ ಸರ ಕದ್ದು ತಪ್ಪಿಸಿಕೊಳ್ಳಲು ದಾರಿ ದೋಚದ ಕಾರಣ ಅಡಕೆ ತೋಟಕ್ಕೆ ನುಗ್ಗಿದ್ದಾರೆ. ಈ ವೇಳೆ ಬೈಕ್​ ಮಣ್ಣಿನಲ್ಲಿ ಸಿಲುಕಿದ್ದು, ಮುಂದೆ ತೆರಳಲಾರದೇ ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಹಾಲು ಗೊಂಡನಹಳ್ಳಿ ಗ್ರಾಮದ ಸುಜಾತಾ ಎಂಬುವವರು ತೋಟಕ್ಕೆ ತೆರಳುತ್ತಿದ್ದ ವೇಳೆ ಬೈಕ್​ನಲ್ಲಿ ಬಂದ ಯುವಕರು ಮಹಿಳೆಗೆ ಖಾರದಪುಡಿ ಎರಚಿ ಬಲವಂತವಾಗಿ ಮಾಂಗಲ್ಯಸರ ಕದ್ದು ಪರಾರಿಯಾಗುತ್ತಿದ್ದರು. ಈ ವೇಳೆ, ಮಹಿಳೆ ಜೋರಾಗಿ ಕಿರುಚಿದ್ದಾಳೆ. ಮಹಿಳೆಯ ಚೀರಾಟ ಕೇಳಿದ ಸ್ಥಳೀಯರು ಕಳ್ಳರನ್ನು ಹಿಡಿದು ಪೋಲೀಸರಿಗೆ ಒಪ್ಪಿಸಿದ್ದಾರೆ. ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಬಂಧಿತರನ್ನು ಚನ್ನರಾಯ ಪಟ್ಟಣ ತಾಲೂಕಿನ ದಿಡಗ ಗ್ರಾಮದ ಯೋಗೀಶ್ ಮತ್ತು ರಾಕೇಶ್ ಎಂದು ಗುರುತಿಸಲಾಗಿದೆ.

ಓದಿ: ಕಣ್ಣಿಗೆ ಖಾರದಪುಡಿ ಎರಚಿ ಕಳ್ಳತನ: ಧಾರವಾಡ ಮೂಲದ ಮೂವರ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.