ತುಮಕೂರು: ಜಿಂಕೆ ಮಾಂಸ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಬ್ರಹ್ಮದೇವರಹಳ್ಳಿಯ ಶಿವಕುಮಾರ, ಚಿನ್ನೇನಹಳ್ಳಿ ಗ್ರಾಮದ ಆದರ್ಶ ಬಂಧಿತರು. ಇನ್ನೋರ್ವ ಆರೋಪಿ ರಾಕೇಶ್ ಪರಾರಿಯಾಗಿದ್ದಾನೆ. ತಾಲೂಕಿನ ಐಡಿ ಹಳ್ಳಿ ಹೋಬಳಿಯ ತಿಪ್ಪಾಪುರ ಗ್ರಾಮದಲ್ಲಿ ಗಂಡು ಜಿಂಕೆಯೊಂದನ್ನು ಬೇಟೆಯಾಡಿ, ಸುಮಾರು 5 ಕೆ.ಜಿ ಮಾಂಸವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು.
ಈ ವೇಳೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಇಬ್ಬರನ್ನು ಬಂಧಿಸಿ, ಸ್ಥಳದಲ್ಲಿದ್ದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕೊಡಿಗೆನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.