ETV Bharat / city

ತುಮಕೂರಿನಲ್ಲಿ ಕೆಎಸ್‌ಆರ್‌ಟಿಸಿ​ ಬಸ್‌ ಅಪಘಾತ.. ಇಬ್ಬರು ಸಾವು, 10 ಮಂದಿಗೆ ಗಾಯ - two died in bus accident

ಚಿಕ್ಕಬಳ್ಳಾಪುರದಿಂದ ಗೌರಿಬಿದನೂರು-ಮಧುಗಿರಿ-ಶಿರಾ ಮಾರ್ಗವಾಗಿ ತಿರುಪತಿಗೆ ತೆರಳುತ್ತಿದ್ದ ಸರ್ಕಾರಿ ಬಸ್​ ಕೊರಟಗೆರೆ ತಾಲೂಕಿನ ಕಾಶಾಪುರ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

two died in bus accident at tumakuru
ತುಮಕೂರಿನಲ್ಲಿ ಬಸ್​ ಅಪಘಾತ
author img

By

Published : Jan 23, 2022, 3:15 PM IST

Updated : Jan 23, 2022, 3:25 PM IST

ತುಮಕೂರು : ಮರಕ್ಕೆ ಕೆಎಸ್‌ಆರ್‌ಟಿಸಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಅರಸಾಪುರ ಗ್ರಾಪಂ ವ್ಯಾಪ್ತಿಯ ಕಾಶಾಪುರ ಗ್ರಾಮದ ಮುಖ್ಯರಸ್ತೆಯಲ್ಲಿ ನಡೆದಿದೆ.

ರಸ್ತೆ ಬದಿ ಇದ್ದ ಭಿಕ್ಷುಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ರೈತ ಗೋಪಾಲನಾಯ್ಕರನ್ನು ಆಸ್ಪತ್ರೆಗೆ ಕರೆದೊಯ್ದಿದ್ದರೂ, ಕೊನೆಗೆ ಮೃತಪಟ್ಟಿದ್ದಾರೆ. ಇನ್ನು ನಿರ್ವಾಹಕ ಸೇರಿ 10 ಮಂದಿಗೆ ಗಾಯಗಳಾಗಿವೆ.

ತುಮಕೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್​ ಅಪಘಾತಕ್ಕೀಡಾಗಿರುವುದು..

ಚಿಕ್ಕಬಳ್ಳಾಪುರದಿಂದ ಗೌರಿಬಿದನೂರು-ಮಧುಗಿರಿ-ಶಿರಾ ಮಾರ್ಗವಾಗಿ ತಿರುಪತಿಗೆ ತೆರಳುತ್ತಿದ್ದ ಸರ್ಕಾರಿ ಬಸ್​ ಕೊರಟಗೆರೆ ತಾಲೂಕಿನ ಕಾಶಾಪುರ ತಿರುವಿನಲ್ಲಿ ಅಪಘಾತವಾಗಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: 'ನಾನು ಸತ್ರೂ ಪರ್ವಾಗಿಲ್ಲ, ಕೊರೊನಾ ಲಸಿಕೆ ಮಾತ್ರ ಬೇಡ'

ನಿರ್ವಾಹಕನ ಕೈಕಾಲು ಮುರಿದಿದೆ. ಉಳಿದ ಕೆಲವರಿಗೆ ಗಾಯಗಳಾಗಿ ಕೊರಟಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

Last Updated : Jan 23, 2022, 3:25 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.