ತುಮಕೂರು: ಜಿಲ್ಲೆಯ ವಿವಿಧ ಪ್ರಗತಿಪರ ಸಂಘಟನೆಗಳು ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ಒಟ್ಟಿಗೆ ಸೇರಿ ಸೌಹಾರ್ದ ಯುಗಾದಿಯನ್ನು ಆಚರಿಸುವ ಮೂಲಕ ವಿಶೇಷವಾಗಿ ಹಬ್ಬವನ್ನು ಆಚರಣೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿದ್ದ ಪ್ರಗತಿಪರ ಚಿಂತಕರು ಬೇವು-ಬೆಲ್ಲವನ್ನು ಹಂಚುವ ಮೂಲಕ ಸೌಹಾರ್ದತೆಯನ್ನು ಸಾರಿದರು.
ಕಾರ್ಯಕ್ರಮದಲ್ಲಿ ಮುಸ್ಲಿಂ ಸಂಘಟನೆಯ ಮುಖಂಡರು, ದಲಿತ ಪರ ಸಂಘಟನೆಯ ಮುಖಂಡರು, ಪರಿಸರವಾದಿಗಳು ಸೇರಿದಂತೆ ಹತ್ತಕ್ಕೂ ಹೆಚ್ಚು ಸಂಘಟನೆಗಳ ಸದಸ್ಯರು ಭಾಗವಹಿಸಿದ್ದರು. ಈ ಮೂಲಕ ವಿಶೇಷವಾಗಿ ಯುಗಾದಿ ಹಬ್ಬವನ್ನು ಆಚರಿಸಿದ್ದಾರೆ.
ಇದನ್ನೂ ಓದಿ : ನೋಡಿ: 2011ರಲ್ಲಿ ಭಾರತ ವಿಶ್ವಕಪ್ ಗೆದ್ದ ರೋಚಕ ಕ್ಷಣ ಮರುಸೃಷ್ಟಿಸಿದ ರವಿಶಾಸ್ತ್ರಿ