ತುಮಕೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಟಿಕೆಟ್ ಹಂಚಿಕೆ ಸೂತ್ರದಂತೆ ತುಮಕೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿರುವುದು ತುಮಕೂರು ಜಿಲ್ಲಾ ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.
ಮುದ್ದಹನುಮೇಗೌಡರನ್ನು ತುಮಕೂರಿನ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಏಕೆ ಘೋಷಣೆ ಮಾಡಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಆಕ್ರೋಶ ವ್ಯಕ್ತಪಡಿಸಿದರು.
ಇದೆ ವೇಳೆ ಮಾತನಾಡಿದ ಮಾಜಿ ಶಾಸಕ ಶಫಿ ಅಹಮದ್, ಇದುವರೆಗೂ ಮತದಾರರ ಬಳಿ ಕಾಂಗ್ರೆಸ್ಗೆ ಮತ ಕೊಡಿ ಎಂದು ಕೇಳಿದ್ದೇವೆಯೇ ಹೊರತು ಬೇರೆ ಪಕ್ಷಕ್ಕೆ ಕೊಡಿ ಎಂದು ಕೇಳಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.