ನೊಯಿಡಾ (ಉತ್ತರ ಪ್ರದೇಶ): ಸೋದರತ್ತೆಯ ಕಾರಣದಿಂದಾಗಿ 12 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೊಯಿಡಾದಲ್ಲಿ ನಡೆದಿದೆ.
ಬಾಲಕಿಯು ತನ್ನ ತಾಯಿ ಸಂಬಂಧಿಕರ ಮನೆಗೆ ತೆರಳಿದ್ದ ವೇಳೆ ಆಕೆಯ ಸೋದರತ್ತೆ ಹೊಲದ ಬಳಿ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಒಬ್ಬ ವ್ಯಕ್ತಿಗೆ ಆಕೆ ಬಾಲಕಿಯನ್ನು ನೀಡಿದ್ದರಿಂದ ಕಾಮುಕನು ಬಾಲಕಿ ಮೇಲೆ ರಾಕ್ಷಸಿ ಕೃತ್ಯ ಮೆರೆದಿದ್ದಾನೆ. ಹಲ್ಲೆ ಮಾಡಿ ಅತ್ಯಾಚಾರ ಎಸಗಿದ್ದಾನೆ. ಈ ವಿಚಾರವನ್ನು ಹೊರಗಡೆ ಬಾಯ್ಬಿಟ್ಟರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.
ಇದನ್ನೂ ಓದಿ: ತ್ರಿಪುರದಲ್ಲಿ ಬಿಜೆಪಿ ಕಾರ್ಯಕರ್ತನಿಗೆ ಗುಂಡಿಕ್ಕಿ ಹತ್ಯೆ
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ದಂಕೂರ್ ಠಾಣಾ ಪೊಲೀಸರು, ಸಂತ್ರಸ್ತೆಯ ಸೋದರತ್ತೆ ಹಾಗೂ ಕಾಮುಕನಿಗಾಗಿ ಬಲೆ ಬೀಸಿದ್ದಾರೆ. ಇದಕ್ಕಾಗಿ ಪೊಲೀಸರ ತಂಡವೊಂದನ್ನು ರಚಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಸುರಕ್ಷತಾ ಘಟಕದ ಉಪ ಪೊಲೀಸ್ ಆಯುಕ್ತರಾದ ವೃಂದಾ ಶುಕ್ಲಾ ತಿಳಿಸಿದ್ದಾರೆ.