ETV Bharat / crime

ಅತ್ಯಾಚಾರ ಪ್ರಕರಣದಲ್ಲಿ ಅಮಾಯಕನ ಬಂಧಿಸಿದರೇ ಪೊಲೀಸರು?: DNA ವರದಿಯಿಂದ ವಿದ್ಯಾರ್ಥಿ ಬಚಾವ್!

author img

By

Published : Aug 30, 2021, 8:25 AM IST

ಅಪ್ರಾಪ್ತೆ ಮೇಲಿನ ಅತ್ಯಾಚಾರ ಹಾಗೂ ಆಕೆ ಗರ್ಭಿಣಿಯಾದ ಪ್ರಕರಣದಲ್ಲಿ 18 ವರ್ಷದ ಬಂಧಿತ ಆರೋಪಿ ಪರ ಡಿಎನ್‌ಎ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಜಾಮೀನಿನ ಮೇಲೆ ಕೋರ್ಟ್‌ ಬಿಡುಗಡೆ ಮಾಡಿರುವ ಕುತೂಹಲಕಾರಿ ಘಟನೆ ಕೇರಳದಲ್ಲಿ ನಡೆಯಿತು.

18-year-old man accused of raping, impregnating girl gets bail after favourable DNA test report
ಅಪ್ರಾಪ್ತೆ ಮೇಲೆ ಅತ್ಯಾಚಾರ, ಗರ್ಭಿಣಿ ಪ್ರಕರಣ; ಆರೋಪಿ ಪರ ಡಿಎನ್‌ಎ ವರದಿಗೆ ಪೊಲೀಸರೇ ಶಾಕ್‌!

ಮಲಪ್ಪುರಂ(ಕೇರಳ): ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಪ್ರಕರಣವೊಂದರಲ್ಲಿ ಇಲ್ಲಿನ ಮಲಪ್ಪುರಂ ಪೊಲೀಸರು ಆರೋಪಿಯನ್ನು ಬಂಧಿಸುವ ಬದಲಾಗಿ ಬೇರೊಬ್ಬ ಯುವಕನನ್ನು ಬಂಧಿಸಿ ಯಡವಟ್ಟು ಮಾಡಿಕೊಂಡಿದ್ದಾರೆ.

ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಹಾಗೂ ಆಕೆ ಗರ್ಭಿಣಿಯಾದ ಪ್ರಕರಣದಲ್ಲಿ 18 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಆದರೆ ಬಾಲಕಿ ಮೇಲೆ ಈತ ಅತ್ಯಾಚಾರ ಮಾಡಿಲ್ಲ ಎಂದು ಡಿಎನ್‌ಎ ವರದಿಯಲ್ಲಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಮಲಪ್ಪುರಂನ ಜಿಲ್ಲಾ ನ್ಯಾಯಾಲಯ ಜಾಮೀನಿನ ಮೇಲೆ ಅಮಾಯಕ ವಿದ್ಯಾರ್ಥಿಯನ್ನು ಬಿಡುಗಡೆಗೊಳಿಸಿತು.

ಇದೇ ವೇಳೆ, ಈ ಪ್ರಕರಣದಲ್ಲಿ ಸೂಕ್ತ ತನಿಖೆ ನಡೆಸಿ ಕೃತ್ಯದಲ್ಲಿ ಭಾಗಿಯಾದ ನಿಜವಾದ ಆರೋಪಿಯನ್ನು ಪತ್ತೆಹಚ್ಚಿ ಶಿಕ್ಷೆ ನೀಡಬೇಕು ಎಂದು ಬಂಧಿತನಾಗಿದ್ದ 12ನೇ ತರಗತಿಯ ವಿದ್ಯಾರ್ಥಿ ಹಾಗೂ ಆತನ ಪೋಷಕರು ಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ... ಪಾಪಿ ತಂದೆಗೆ 17 ವರ್ಷ ಜೈಲೂಟ, 3 ಲಕ್ಷ ರೂ. ದಂಡ

'ಅತ್ಯಾಚಾರ ಆರೋಪದ ಮೇಲೆ ಮಧ್ಯರಾತ್ರಿಯಲ್ಲಿ ವೇಳೆ ಪೊಲೀಸರು ನನ್ನನ್ನು ಠಾಣೆಗೆ ಕರೆದುಕೊಂಡು ಬಂದರು. ಅಲ್ಲಿ ಆರೋಪದ ಬಗ್ಗೆ ನನಗೆ ತಿಳಿಸಿದರು. ಆದರೆ, ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ನನಗೆ ಖಚಿತವಾಗಿದ್ದರಿಂದ ಡಿಎನ್ಎ ಪರೀಕ್ಷೆಗೆ ಮನವಿ ಮಾಡಿದೆ' ಎಂದು ವಿದ್ಯಾರ್ಥಿ ಹೇಳಿದ್ದಾನೆ.

ಪೊಲೀಸರು ಹೇಳಿದ್ದೇನು?

'ಆಸ್ಪತ್ರೆಗೆ ದಾಖಲಾಗಿದ್ದ ಸಂತ್ರಸ್ತೆಯ ಹೇಳಿಕೆ ಆಧರಿಸಿ ಯುವಕನನ್ನು ಠಾಣೆಗೆ ಕರೆದುಕೊಂಡು ಬರಲಾಗಿತ್ತು' ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ. 'ಈ ಘಟನೆಯ ದಿನಾಂಕ ಹಾಗೂ ಸ್ಥಳದ ಬಗ್ಗೆ ಸಂತ್ರಸ್ತೆ ಮಾಹಿತಿ ನೀಡಿದ್ದಳು. ಆಕೆ ನೀಡಿದ್ದ ವಿಳಾಸ ಇದೇ ಯುವಕನ ಮನೆಯದ್ದೇ ಆಗಿತ್ತು. ಮಹಿಳಾ ಪೊಲೀಸ್‌ ಅಧಿಕಾರಿಗಳ ಸಮ್ಮುಖದಲ್ಲಿ ಸಂತ್ರಸ್ತೆ ಸಿಆರ್‌ಪಿಸಿ ಸೆಕ್ಷನ್‌ 164ರ ಅಡಿಯಲ್ಲಿ ಮ್ಯಾಜಿಸ್ಟ್ರೇಟ್‌ಗೆ ಹೇಳಿಕೆ ನೀಡಿದ್ದಳು. ಪ್ರಕರಣದ ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು, ಆತನಿಗಾಗಿ ತನಿಖೆ ಮುಂದುವರಿದಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.