ಕತಿಹಾರ್ (ಬಿಹಾರ): ಟ್ರಕ್ ಹಾಗೂ ಮಿನಿ ಟ್ರಕ್ ನಡುವೆ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಬಿಹಾರದ ಕತಿಹಾರ್ನಲ್ಲಿ ನಡೆದಿದೆ.
ಟ್ರಕ್ ಚಾಲಕ ನಿದ್ದೆ ಮಂಪರಿನಲ್ಲಿ ವಾಹನ ಚಲಾಯಿಸುತ್ತಿದ್ದ ಕಾರಣ ಅಪಘಾತ ಸಂಭವಿಸಿದೆ. ಎರಡೂ ವಾಹನಗಳ ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದು, ಟ್ರಕ್ನಲ್ಲಿದ್ದ ಇನ್ನೊಬ್ಬ ವ್ಯಕ್ತಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ.
ಇದನ್ನೂ ಓದಿ: ಗಂಡನ ಅಗಲಿಕೆಯ ವೇದನೆ: ಪುತ್ರಿಯರೊಂದಿಗೆ ಕೆರೆಗೆ ಹಾರಿ ಪ್ರಾಣ ಬಿಟ್ಟಳು ಪತ್ನಿ
ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.