ಬೆಂಗಳೂರು: ದ್ವಿಚಕ್ರ ವಾಹನಗಳು ಹಾಗೂ ಮೊಬೈಲ್‌ಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಚಾಮರಾಜಪೇಟೆ ಪೊಲೀಸರು ಬಂಧಿಸಿದ್ದಾರೆ.
ಕಾರ್ಯಾಚರಣೆ ನಡೆಸಿದ ಪೊಲೀಸರು 11.75 ಲಕ್ಷ ರೂ. ಮೌಲ್ಯದ 5 ದ್ವಿಚಕ್ರ ವಾಹನ, ವಿವಿಧ ಕಂಪನಿಯ 65 ಮೊಬೈಲ್ ಸೇರಿ ಮೂವರು ಬಂಧಿತರಿಂದ 1. 75 ಲಕ್ಷ ನಗದು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಆರೋಪಿಗಳನ್ನು ಚಾಮರಾಜಪೇಟೆ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.