ಭಿಲ್ವಾರ (ರಾಜಸ್ಥಾನ): ಯಮನಂತೆ ಬಂದ ಕಂಟೇನರ್ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಭಿಲ್ವಾರ ಜಿಲ್ಲೆಯಲ್ಲಿ ನಡೆದಿದೆ.
ಭಿಲ್ವಾರದ ರಾಷ್ಟ್ರೀಯ ಹೆದ್ದಾರಿ 79ರಲ್ಲಿ ಸಂಭವಿಸಿದ ಅಪಘಾತದಲ್ಲಿ ಇನ್ನೂ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಭಿಲ್ವಾರಾದ ಮಹಾತ್ಮ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಚಲಿಸುತ್ತಿರುವ ಕಾರಿನಲ್ಲೇ ಯುವತಿ ಮೇಲೆ ಗ್ಯಾಂಗ್ರೇಪ್.. ಕೃತ್ಯದ ವಿಡಿಯೋ ಹರಿಬಿಟ್ಟ ದುರುಳರು
ಸ್ಥಳಕ್ಕೆ ಬಂದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ತನಿಖೆ ನಡೆಸುತ್ತಿದ್ದಾರೆ.