ETV Bharat / crime

ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ನಾಲ್ವರು ಕಾರ್ಮಿಕರ ದುರ್ಮರಣ - ರತ್ನಗಿರಿ

ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿನ ಘಾರ್ದಾ ಕೆಮಿಕಲ್ಸ್ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

4 dead in Maharashtra chemical factory fire
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ
author img

By

Published : Mar 20, 2021, 2:59 PM IST

ರತ್ನಗಿರಿ (ಮಹಾರಾಷ್ಟ್ರ): ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಅಗ್ನಿ ಅನಾಹುತ ಸಂಭವಿಸಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ನಡೆದಿದೆ.

ರತ್ನಗಿರಿಯ ಲೋಟೆ-ಪರಶುರಾಮ ಎಂಐಡಿಸಿ ಕಾಂಪ್ಲೆಕ್ಸ್ ಬಳಿ ಇರುವ ಘಾರ್ದಾ ಕೆಮಿಕಲ್ಸ್ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ 9.15ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಸ್ಥಳಕ್ಕೆ ನಾಲ್ಕು ವಾಹನಗಳಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಕಾರ್ಖಾನೆಯೊಳಗಿದ್ದ ಕಾರ್ಮಿಕರನ್ನು ರಕ್ಷಿಸಿದ್ದಾರೆ.

ಇದನ್ನೂ ಓದಿ: ಮನ್ಸುಖ್​ ಹಿರೇನ್ ಡೆತ್​ ಕೇಸ್​: ತನಿಖೆ ಹೊಣೆ ರಾಷ್ಟ್ರೀಯ ತನಿಖಾ ದಳದ ಹೆಗಲಿಗೆ

ಆದರೆ ನಾಲ್ವರು ಮೃತಪಟ್ಟಿದ್ದು, ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳು ಕಾರ್ಮಿಕನನ್ನು ಚಿಕಿತ್ಸೆಗಾಗಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ, ತನಿಖೆ ಮುಂದುವರೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.