ETV Bharat / crime

ವಿಷಪೂರಿತ ಮದ್ಯ ಸೇವಿಸಿ ರಾಜಸ್ಥಾನದಲ್ಲಿ ನಾಲ್ವರು ಸಾವು - ಭಿಲ್ವಾರಾ ಕ್ರೈಂ ಸುದ್ದಿ

4 people died in Bhilwara after consuming poisonous liquor
ವಿಷಪೂರಿತ ಮದ್ಯ ಸೇವಿಸಿ ರಾಜಸ್ಥಾನದಲ್ಲಿ ನಾಲ್ವರು ಸಾವು
author img

By

Published : Jan 29, 2021, 8:30 AM IST

Updated : Jan 29, 2021, 8:44 AM IST

08:24 January 29

ಮೂವರು ಮಹಿಳೆಯರು ಸೇರಿ ಒಟ್ಟು 9 ಮಂದಿ ವಿಷಕಾರಿ ಮದ್ಯ ಸೇವಿಸಿದ್ದು, ಇವರಲ್ಲಿ ನಾಲ್ವರು ಸಾವನ್ನಪ್ಪಿದ್ದರೆ, ಐವರ ಸ್ಥಿತಿ ಗಂಭೀರವಾಗಿದೆ.

ಭಿಲ್ವಾರಾ (ರಾಜಸ್ಥಾನ): ವಿಷಪೂರಿತ ಮದ್ಯ ಸೇವಿಸಿ ನಾಲ್ವರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಭಿಲ್ವಾರಾದಲ್ಲಿ ನಡೆದಿದೆ.  

ಭಿಲ್ವಾರಾ ಜಿಲ್ಲೆಯ ಮಾಹುವಾ ಮಾನ್‌ಪುರ ಗ್ರಾಮದಲ್ಲಿ ಮೂವರು ಮಹಿಳೆಯರು ಸೇರಿ ಒಟ್ಟು 9 ಮಂದಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯ ಸೇವಿಸಿದ್ದರು. ಉಳಿದ ಐವರ ಸ್ಥಿತಿ ಕೂಡ ಗಂಭೀರವಾಗಿದ್ದು, ಇವರನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  

ಇದನ್ನೂ ಓದಿ: ಹೆಚ್ಚಿನ ದರಕ್ಕೆ ಮದ್ಯ ಮಾರಾಟ ಆರೋಪ : ಅಧಿಕಾರಿಗಳ ವಿರುದ್ಧ ನಿವೃತ್ತ ಸೈನಿಕರ ಆಕ್ರೋಶ

ಈ ಸಂಬಂಧ ಮಂಡಲ್​ಗಢ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಶುರು ಮಾಡಿದ್ದಾರೆ.  

ಇತ್ತೀಚೆಗಷ್ಟೇ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ವಿಷಕಾರಿ ಮದ್ಯ ಸೇವಿಸಿ 25 ಜನರು ಪ್ರಾಣ ಕಳೆದುಕೊಂಡಿದ್ದರು. 

Last Updated : Jan 29, 2021, 8:44 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.