ರಾಯ್ಪುರ (ಛತ್ತೀಸ್ಗಢ): ಆಸ್ಪತ್ರೆಯೊಂದರಲ್ಲಿ ಅಗ್ನಿ ದುರಂತ ಸಂಭವಿಸಿ ಐವರು ರೋಗಿಗಳು ಮೃತಪಟ್ಟಿರುವ ಘಟನೆ ರಾಯ್ಪುರದಲ್ಲಿ ನಡೆದಿದೆ.
ಶನಿವಾರ ರಾತ್ರಿ ರಾಯ್‌ಪುರದ ರಾಜಧಾನಿ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಅಲ್ಲಿ ದಾಖಲಾಗಿದ್ದ ಉಳಿದ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.
ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುವುದಾಗಿ ರಾಯ್‌ಪುರದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತರ್ಕೇಶ್ವರ ಪಟೇಲ್ ತಿಳಿಸಿದ್ದಾರೆ.