ಬುಡ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ಕೇರಳ ಮೂಲದ ಸಿಆರ್ಪಿಎಫ್ ಯೋಧನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದೀರ್ಘಾವಧಿ ರಜೆ ಬಳಿಕ ಕೇರಳದಿಂದ ಬುಡ್ಗಾಮ್ಗೆ ಹಿಂದಿರುಗಿದ್ದ ಅವರು ಮಾನಸಿಕವಾಗಿ ಅಸ್ವಸ್ಥರಾಗಿದ್ದರು. ಹೀಗಾಗಿ ಅವರ ಕೈಗೆ ಯಾವುದೇ ಶಸ್ತ್ರಾಸ್ತ್ರಗಳನ್ನು ಅಧಿಕಾರಿಗಳು ನೀಡಿರಲಿಲ್ಲ. ಆದರೆ ಇಂದು ಬೆಳಗ್ಗೆ ಎಲ್ಲರೂ ಕರ್ತವ್ಯದಲ್ಲಿ ನಿರತರಾಗಿದ್ದ ವೇಳೆ ಮತ್ತೊಬ್ಬ ಯೋಧನ ಬಳಿ ಇದ್ದ ಪಿಸ್ತೂಲು ತೆಗೆದುಕೊಂಡು ಶಿಬಿರದಲ್ಲಿ ಗುಂಡು ಹಾರಿಸಿಕೊಂಡಿದ್ದಾರೆ.
ಇದನ್ನೂ ಓದಿ: ಅನಂತನಾಗ್ ಎನ್ಕೌಂಟರ್: ಉಗ್ರನ ಹತ್ಯೆ
ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.