ಪಾಲ್ಘರ್ (ಮಹಾರಾಷ್ಟ್ರ): ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ 14 ರೋಗಿಗಳು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ.
ಪಾಲ್ಘರ್ ಜಿಲ್ಲೆಯ ವಾಸೈ-ವಿರಾರ್ನ ವಿಜಯ್ ವಲ್ಲಭ್ ಆಸ್ಪತ್ರೆಯ ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹಲವರು ಗಾಯಗೊಂಡಿದ್ದು, ಗಾಯಾಳು ರೋಗಿಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಶಿಫ್ಟ್ ಮಾಡಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಮೊನ್ನೆಯಷ್ಟೇ ಮಹಾರಾಷ್ಟ್ರ ನಾಸಿಕ್ ಜಿಲ್ಲೆಯ ಡಾ.ಝಾಕಿರ್ ಹುಸೇನ್ ಆಸ್ಪತ್ರಯಲ್ಲಿ ಆಕ್ಸಿಜನ್ ಸೋರಿಕೆಯಿಂದಾಗಿ 24 ಕೊರೊನಾ ರೋಗಿಗಳು ಪ್ರಾಣ ಕಳೆದುಕೊಂಡಿದ್ದರು. ಇದೀಗ ಮತ್ತೊಂದು ದುರಂತ ಸಂಭವಿಸಿದೆ.
ತನಿಖೆಗೆ ಸಿಎಂ ಆದೇಶ:
ಘಟನೆ ಸಂಬಂಧ ತನಿಖೆ ನಡೆಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆದೇಶ ನೀಡಿದ್ದಾರೆ.