ಚಿತ್ರದುರ್ಗ : ಸಾಲ ನೀಡಿದ್ದ ಹಣವನ್ನು ವಾಪಸ್ ನೀಡುವುದಾಗಿ ವ್ಯಕ್ತಿಯನ್ನು ಕರೆಸಿಕೊಂಡು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಬಳಿ ನಡೆದಿದೆ.
ಹೊರಪೇಟೆ ನಿವಾಸಿ ಮಹ್ಮದ್ ಅಜರ್(28) ಮೃತ ದುರ್ದೈವಿ. ಮುಬಾರಕ್, ಬಾಬು ಹಾಗೂ ಪ್ರದೀಪ್ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ನಗರ ಠಾಣಾ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಹಣದ ವ್ಯವಹಾರ ಹಿನ್ನೆಲೆಯಲ್ಲಿ ಈ ದುಷ್ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ.