ಬೆಂಗಳೂರು: ಕೌಟುಂಬಿಕ ಕಲಹಕ್ಕೆ ನ್ಯಾಯ ಸಿಗುತ್ತಿಲ್ಲ ಎಂದು ಬೇಸತ್ತ ವ್ಯಕ್ತಿಯೊರ್ವ ವಿಧಾನಸೌಧದ ಒಳಗೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.
ನಂದಕುಮಾರ್ (54) ಆತ್ಮಹತ್ಯೆಗೆ ಯತ್ನಿಸಿರುವ ವ್ಯಕ್ತಿಯಾಗಿದ್ದು, ಕೂಡಲೇ ಈತನನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ನಂದ ಕುಮಾರ್ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೆ.ಸಿ.ನಗರ ವ್ಯಾಪ್ತಿಯ ಪ್ಯಾಲೇಸ್ ಗುಟ್ಟಹಳ್ಳಿ ನಿವಾಸಿಯಾಗಿರುವ ನಂದಕುಮಾರ್ ತಮ್ಮ ಕುಟುಂಬಸ್ಥರ ವಿರುದ್ದ ಜೆಸಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ಕುಟುಂಬಸ್ಥರನ್ನು ಬಂಧಿಸಿ ನ್ಯಾಯ ಒದಗಿಸಿಲ್ಲ ಎಂದು ಆರೋಪಿಸಿದ್ದಾರೆ ಎಂದು ತಿಳಿದು ಬಂದಿದೆ.
ವಿಧಾನಸೌಧದಲ್ಲಾದರೂ ನ್ಯಾಯ ಸಿಗುತ್ತದೆ ಎಂದು ಯೋಚಿಸಿ ಬಂದ ನಂದಕುಮಾರ್ ಕೊಠಡಿ ಸಂಖ್ಯೆ 106 ಬಳಿ ಸ್ಯಾನಿಟೈಸರ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.