ತುಮಕೂರು: ಪಾವಗಡ ತಾಲೂಕಿನಲ್ಲಿ ಸಾಕಷ್ಟು ಬಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರೂ ಕೂಡ ಪದೇ ಪದೆ ಮಟ್ಕಾ ಹಾಗೂ ಜೂಜಾಟ ನಡೆಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಶ್ವತ್ಥ ನಾರಾಯಣ ಎಂಬಾತನೇ ಗೂಂಡಾ ಕಾಯ್ದೆಯಡಿ ಬಂಧಿತನಾದ ಆರೋಪಿಯಾಗಿದ್ದಾನೆ.
ಪಾವಗಡ ಡಿವೈಎಸ್ಪಿ ನೀಡಿದ ವರದಿಯ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಆರೋಪಿ ಅಶ್ವತ್ಥ ನಾರಾಯಣನನ್ನು 'ಸ್ಥಾನಬದ್ಧತೆ' ಕಾನೂನಿನಡಿ ಜಿಲ್ಲಾ ಕಾರಾಗೃಹದಲ್ಲಿ ಬಂಧನದಲ್ಲಿ ಇರಿಸಲು ಆದೇಶ ನೀಡಿದ್ದಾರೆ. ಇದರನ್ವಯ ಆರೋಪಿಯನ್ನು ಜಿಲ್ಲಾ ಕಾರಾಗೃಹದಲ್ಲಿ ಬಂಧಿಸಿಡಲಾಗಿದೆ.