ಬಂಟ್ವಾಳ(ದಕ್ಷಿಣ ಕನ್ನಡ): ಅಪ್ರಾಪ್ತ ಬಾಲಕಿಯೋರ್ವಳಿಗೆ ಅಶ್ಲೀಲ ಚಿತ್ರಗಳನ್ನು ಹೊಂದಿರುವ ಮೊಬೈಲ್ ಮೆಮೊರಿ ಕಾರ್ಡ್ ನೀಡಿದ ಆರೋಪದ ಮೇಲೆ ಕಲ್ಲಡ್ಕದ ನಿವಾಸಿಯೋರ್ವನನ್ನು ವಿಟ್ಲ ಪೋಲಿಸರು ಬಂಧಿಸಿದ ಘಟನೆ ನಡೆದಿದೆ.
ಕಲ್ಲಡ್ಕ ನಿವಾಸಿ ಸಮೀರ್ (33) ಎಂಬುವರು ಬಂಧಿತ ಆರೋಪಿ. ಮಾಣಿ ಸಮೀಪದ ಬುಡೋಳಿಯಲ್ಲಿರುವ ದಿನಸಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸಮೀರ್ ಅಪ್ರಾಪ್ತ ಬಾಲಕಿಗೆ ಅಶ್ಲೀಲ ಚಿತ್ರಗಳನ್ನು ಹೊಂದಿರುವ ಮೆಮೊರಿ ಕಾರ್ಡ್ ನೀಡಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ದೂರು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.