ಉಳ್ಳಾಲ: ಇಲ್ಲಿನ ಪೊಲೀಸ್ ಠಾಣೆಯಲ್ಲಿ 5ಕ್ಕಿಂತಲೂ ಅಧಿಕ ಪ್ರಕರಣ ಹೊಂದಿದ್ದ ಆರೋಪಿ, ಕಾಸರಗೋಡು ಸಮೀಪದ ಮೇಲ್ಪರಂಬ ಪೊಲೀಸ್ ಠಾಣಾ ವ್ಯಾಪ್ತಿಯ ಚಟ್ಟಂಚಾಲು ಪ್ರದೇಶದಲ್ಲಿ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಚೆಂಬುಗುಡ್ಡೆ ನಿವಾಸಿ ಹಿದಾಯತ್ (28) ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಕಾಸರಗೋಡು ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮೇ.5 ರಂದು ಶವ ಮಹಜರು ಪರೀಕ್ಷೆ ನಡೆಯಲಿದೆ. ಬಳಿಕವಷ್ಟೇ ಸಾವಿನ ಕಾರಣ ತಿಳಿದು ಬರಬಹುದು.
ಹಿದಾಯತ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ, ಕಳವು, ಜಾನುವಾರು ಕಳವು ಕುರಿತು 5ಕ್ಕಿಂತಲೂ ಅಧಿಕ ಪ್ರಕರಣಗಳಿವೆ. ಉಪ್ಪಳದಲ್ಲಿ ಕೆಲಸಕ್ಕಿದ್ದ ಹಿದಾಯತ್ ಮೇ.1 ರಿಂದ ನಾಪತ್ತೆಯಾಗಿದ್ದರೆಂದು ತಿಳಿದು ಬಂದಿದೆ.
ಎ.3 ರಂದು ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಚಟ್ಟಂಚಾಲು ಎಂಬಲ್ಲಿ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಹಿದಾಯತ್ ಮೊಬೈಲ್ ಮಾತ್ರ ಪತ್ತೆಯಾಗಿದ್ದು, ಅದರಲ್ಲಿ ಸಿಮ್ ಕಾರ್ಡ್ ಪತ್ತೆಯಾಗಿಲ್ಲ. ಮೇಲ್ಪರಂಬ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.