ಹಾವೇರಿ: ಹಾನಗಲ್ ತಾಲೂಕಿನ ಅಕ್ಕಿ ಆಲೂರು ಸಮುದಾಯ ಆರೋಗ್ಯ ಕೇಂದ್ರದ ಎಕ್ಸರೇ ಟೆಕ್ನಿಶಿಯನ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ.
ಓದಿ: ಕಲ್ಲುಕ್ವಾರಿ ಸ್ಫೋಟ ಪ್ರಕರಣಗಳನ್ನು ಸಿಬಿಐಗೆ ವಹಿಸಬೇಕು : ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಒತ್ತಾಯ
ಟೆಕ್ನಿಶಿಯನ್ ಕುಬೇರ ಸಾವಂತ ಕಳೆದ ಎರಡು ವರ್ಷಗಳಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಗುತ್ತಿಗೆ ನೌಕರಳಾಗಿ ಕೆಲಸ ಮಾಡುವ ಮಹಿಳೆ ಆರೋಪಿಸಿದ್ದಾಳೆ. ಆಸ್ಪತ್ರೆಯಲ್ಲಿ ಯಾರೂ ಇಲ್ಲದ ವೇಳೆ ಕುಬೇರ ಸಾವಂತ ತನ್ನ ಜೊತೆ ಅನುಚಿತವಾಗಿ ನಡೆದುಕೊಂಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ.
ಈ ಕುರಿತಂತೆ ಹಾನಗಲ್ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾಳೆ. ಕುಬೇರ ಸಾವಂತ ಹೇಳಿದ ಹಾಗೆ ಕೇಳದಿದ್ದರೆ ಮೇಲಾಧಿಕಾರಿಗಳಿಗೆ ದೂರು ನೀಡುತ್ತಿದ್ದ. ಅಲ್ಲದೇ ಪದೇ ಪದೆ ಅಶ್ಲೀಲ ಪದಗಳಿಂದ ಲೈಂಗಿಕ ಸಂಪರ್ಕಕ್ಕೆ ಒತ್ತಾಯಿಸುತ್ತಿದ್ದ ಎಂದು ಮಹಿಳೆ ಆರೋಪಿಸಿದ್ದಾಳೆ.
ಮಹಿಳೆಗೆ ಹಾನಗಲ್ ದಲಿತ ಹೋರಾಟ ಸಮಿತಿ ಸಹಕಾರ ನೀಡಿದ್ದು, ಈ ಕೂಡಲೇ ಆರೋಪಿಯನ್ನು ಬಂಧಿಸುವಂತೆ ಸಮಿತಿ ಆಗ್ರಹಿಸಿದೆ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪೊಲೀಸ್ ಕಚೇರಿ ಮುಂದೆ ತಮಟೆ ಚಳವಳಿ ನಡೆಸುವುದಾಗಿ ಸಮಿತಿ ಎಚ್ಚರಿಕೆ ನೀಡಿದೆ.