ಮುಂಬೈ: ಉದ್ಯಮಿ ಮುಖೇಶ್ ಅಂಬಾನಿ ನಿವಾಸ ಆ್ಯಂಟಿಲಿಯಾ ಬಳಿ ಅನುಮಾನಾಸ್ಪದವಾಗಿ ಮತ್ತೊಂದು ದ್ವಿಚಕ್ರ ವಾಹನ ಪತ್ತೆಯಾಗಿದೆ.
ಸ್ಥಳಕ್ಕೆ ಬಂದಿರುವ ಪೊಲೀಸರು ದ್ವಿಚಕ್ರ ವಾಹನದ ವಾಹನ ಸಂಖ್ಯೆ ಪಡೆದು ತನಿಖೆ ಆರಂಭಿಸಿದ್ದಾರೆ. ಈ ಸಂಖ್ಯೆಯು ಆರ್‌ಟಿಒ ನೋಂದಣಿಯಲ್ಲಿಲ್ಲ ಎಂಬುದು ತಿಳಿದು ಬಂದಿದೆ. ಈ ಹಿಂದೆ ಸ್ಕಾರ್ಪಿಯೋ ಕಾರು ಪತ್ತೆಯಾಗಿದ್ದ ಸ್ವಲ್ಪ ದೂರದಲ್ಲಿ ಬೈಕ್ ಕಂಡುಬಂದಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಇದನ್ನೂ ಓದಿ: "ಭ್ರಷ್ಟಾಚಾರ ಆರೋಪದ ತನಿಖೆ ನಡೆಸಿ": ಮಹಾ ಸಿಎಂಗೆ ಪತ್ರ ಬರೆದ ಅನಿಲ್ ದೇಶ್ಮುಖ್
ಫೆ. 18ರಂದು ಉದ್ಯಮಿ ಮುಖೇಶ್ ಅಂಬಾನಿ ಅವರ ನಿವಾಸದ ಬಳಿ ಜಿಲೆಟಿನ್ ಇರಿಸಿದ್ದ ಸ್ಕಾರ್ಪಿಯೋ ಕಾರು ಪತ್ತೆಯಾಗಿತ್ತು. ಮುಂಬೈ ಕ್ರೈಂ ಬ್ರ್ಯಾಂಚ್ ಹಾಗೂ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಜಂಟಿಯಾಗಿ ಪ್ರಕರಣದ ತನಿಖೆ ನಡೆಸುತ್ತಿದೆ.