ಹುಬ್ಬಳ್ಳಿ: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಇಬ್ಬರು ಅಂತರ್ ರಾಜ್ಯ ಯುವತಿಯರನ್ನು ರಕ್ಷಣೆ ಮಾಡಿದ್ದಾರೆ.
ಓದಿ: ಸಿಡಿ ಪ್ರಕರಣ: ಸದಾಶಿವ ನಗರ ಠಾಣೆಯಲ್ಲಿ ರಮೇಶ್ ಜಾರಕಿಹೊಳಿ ಪರ ಆಪ್ತನಿಂದ ದೂರು!?
ಹುಬ್ಬಳ್ಳಿಯ ನವನಗರದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ಪೆಕ್ಟರ್ ಅಲ್ತಾಫ್ ಮುಲ್ಲಾ ಹಾಗೂ ಸಿಬ್ಬಂದಿ ದಾಳಿ ಮಾಡಿದ್ದಾರೆ. ಕೋಲ್ಕತ್ತಾ ಮೂಲದ ಇಬ್ಬರು ಯುವತಿಯರನ್ನು ರಕ್ಷಿಸಿದ್ದು, ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆ ಹಾಗೂ ಒಬ್ಬ ಗ್ರಾಹಕನನ್ನು ಬಂಧಿಸಲಾಗಿದೆ.
ಕೋಲ್ಕತ್ತಾ ಮೂಲದ ಇಬ್ಬರು ಯುವತಿಯರನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದ್ದು, ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಮೇಲೆ ದೂರು ದಾಖಲು ಮಾಡಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಹುಬ್ಬಳ್ಳಿಯ ಎಪಿಎಂಸಿ-ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.