ETV Bharat / crime

ಬೆಳ್ತಂಗಡಿ: ಅಪ್ರಾಪ್ತೆಯ ಅತ್ಯಾಚಾರ, ಗರ್ಭಪಾತ ಪ್ರಕರಣದ ಪ್ರಮುಖ ಆರೋಪಿ ಸೆರೆ - kannada top news

ಬಾಲಕಿಗೆ ಪ್ರಾಣ ಬೆದರಿಕೆ ಹಾಕಿ ನಿರಂತರ ಅತ್ಯಾಚಾರ ಎಸಗುತ್ತಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

rape-of-minor-girl-and-abortion-case-main-accused-sudhir-arrested
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಪ್ರಕರಣ: ಪ್ರಮುಖ ಆರೋಪಿ ಸುಧೀರ್ ಬಂಧನ
author img

By

Published : Jan 18, 2023, 6:19 AM IST

ಬೆಳ್ತಂಗಡಿ (ದಕ್ಷಿಣ ಕನ್ನಡ) : ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಗರ್ಭಪಾತ ಪ್ರಕರಣದಲ್ಲಿ ಪ್ರಮುಖ ಆರೋಪಿ ಸುಧೀರ್ ಜೋಗಿ ಎಂಬಾತನನ್ನು ಚಿಕ್ಕಮಗಳೂರಿನಲ್ಲಿ ಬೆಳ್ತಂಗಡಿ ಪೊಲೀಸರು ಸೆರೆ ಹಿಡಿದಿದ್ದಾರೆ. ಡಿಸೆಂಬರ್​ 26, 2021 ರಂದು ಟಿವಿ ನೋಡಲು ತನ್ನ ಮನೆಗೆ ಬರುತ್ತಿದ್ದ ಬಾಲಕಿಯ ಮೇಲೆ ಆರೋಪಿ ದುಷ್ಕೃತ್ಯ ಎಸಗಿದ್ದಾನೆ. ಮತ್ತು ಈತನಿಗೆ ಹಲವರು ಸಾಥ್‌ ನೀಡಿದ್ದರು ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರು ಪೋಕ್ಸೋ ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳಡಿ 2023ನೇ ಜನವರಿ 2 ರಂದು ಪ್ರಕರಣ ದಾಖಲಿಸಿಕೊಂಡಿದ್ದರು.

ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕೊಪ್ಪದಗಂಡಿ ನಿವಾಸಿ ಪ್ರಕರಣದ ಮೂರನೇ ಆರೋಪಿ ಮನೋಹರ (23) ಮತ್ತು ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕೊಪ್ಪದಗಂಡಿ ನಿವಾಸಿ ನಾಲ್ಕನೇ ಆರೋಪಿ ಮಾಧವ ಯಾನೆ ಮಾಧು(30) ಎಂಬವರನ್ನು ಜನವರಿ 7ರಂದು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ಇದೀಗ ಪ್ರಮುಖ ಆರೋಪಿ ಕಡಿರುದ್ಯಾವರ ಗ್ರಾಮದ ಕೊಪ್ಪದಗುಂಡಿ ನಿವಾಸಿ ಸುಧೀರ್ ಜೋಗಿ (27) ಎಂಬವನನ್ನು ಚಿಕ್ಕಮಗಳೂರಿನಲ್ಲಿ ಅರೆಸ್ಟ್ ಮಾಡಲಾಗಿದೆ.

ಬಿಲ್ಲವರಿಂದ ಪ್ರತಿಭಟನೆ ಎಚ್ಚರಿಕೆ: ಅತ್ಯಾಚಾರ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಬಂಧಿಸದೇ ಪೊಲೀಸರು ಸುಮ್ಮನಿದ್ದಾರೆ. ತಕ್ಷಣ ಆರೋಪಿಯನ್ನು ಬಂಧಿಸಬೇಕು. ಇಲ್ಲದಿದ್ದಲ್ಲಿ ಬೃಹತ್ ಪ್ರತಿಭಟನಾ ಸಭೆಯ ಎಚ್ಚರಿಕೆಯನ್ನು ಬಿಲ್ಲವ ಸಮುದಾಯದವರು ನೀಡಿದ್ದರು. ಇದೀಗ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಪುತ್ತೂರು: ಮನೆಯಂಗಳದಲ್ಲೇ ಯುವತಿಗೆ ಚೂರಿ ಇರಿದು ಕೊಲೆ.. ಪ್ರಕರಣ ದಾಖಲು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.