ಭೋಪಾಲ್ (ಮಧ್ಯಪ್ರದೇಶ): ಭೋಪಾಲ್ನ ಹಮಿದಿಯಾ ಆಸ್ಪತ್ರೆಯಿಂದ 800 ರೆಮ್ಡೆಸಿವಿರ್ ಚುಚ್ಚುಮದ್ದು ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕೊಹೆಫಿಜಾ ಠಾಣಾ ಪೊಲೀಸರು ಆಸ್ಪತ್ರೆಗೆ ಬಂದು ಸಿಸಿಟಿವಿಗಳ ಪರಿಶೀಲನೆ ನಡೆಸುತ್ತಿದ್ದಾರೆ. ಆಸ್ಪತ್ರೆಯ ಸಿಬ್ಬಂದಿಯೇ ಕಳ್ಳತನ ಮಾಡಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ದೇಶದಲ್ಲಿ ಕೊರೊನಾ ಅಟ್ಟಹಾಸ: ಒಂದೇ ದಿನ 1,501 ಮಂದಿ ಸಾವು.. 2.61 ಲಕ್ಷ ಕೇಸ್ ಪತ್ತೆ!
ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಸಚಿವ ಪಿ ಸಿ ಶರ್ಮಾ, ಹಮಿದಿಯಾ ಆಸ್ಪತ್ರೆ ಹಾಗೂ ಭೋಪಾಲ್ ಜಿಲ್ಲಾಡಳಿತದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಳಸಂತೆಯಲ್ಲಿ ರೆಮ್ಡೆಸಿವಿರ್ ಮಾರಾಟವಾಗುತ್ತಿರುವ ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ಇಂದೋರ್ನಲ್ಲಿ ಕಾಳಸಂತೆಯಲ್ಲಿ ರೆಮ್ಡೆಸಿವಿರ್ ಮಾರುತ್ತಿದ್ದ ಯುವಕನನ್ನು ಬಂಧಿಸಲಾಗಿದೆ. ಈತ ಕುಟುಂಬವೊಂದಕ್ಕೆ 22,000 ರೂ.ಗಳಿಗೆ ರೆಮ್ಡೆಸಿವಿರ್ ಮಾರಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ.