ಚಿಕ್ಕಮಗಳೂರು: ರಾತ್ರೋರಾತ್ರಿ ಬೈಕ್ ಎಗರಿಸುತ್ತಿದ್ದ ಖತರ್ನಾಕ್ ಕಳ್ಳನನ್ನು ಚಿಕ್ಕಮಗಳೂರು ಜಿಲ್ಲೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಿಲ್ಲೆಯ ಕಡೂರು ತಾಲೂಕಿನ ಶೆಟ್ಟಿಹಳ್ಳಿಯ ಮೋಹನ್ ಬಂಧಿತ ಆರೋಪಿ. ಬಂಧಿತನಿಂದ 4 ಲಕ್ಷ ಮೌಲ್ಯದ 11 ಬೈಕ್ ವಶಕ್ಕೆ ಪಡೆಯಲಾಗಿದೆ.
ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಹಿನ್ನೆಲೆ ಈ ಬಗ್ಗೆ ತನಿಖೆಯನ್ನು ಪೊಲೀಸರು ಕೈಗೊಂಡಿದ್ದರು. ತನಿಖೆ ವೇಳೆ ಬೆಂಗಳೂರು, ತುಮಕೂರು ಸೇರಿ ವಿವಿಧ ಜಿಲ್ಲೆಯಲ್ಲಿ ಈ ಸಂಬಂಧ 11 ಪ್ರಕರಣ ಬಯಲು ಆಗಿತ್ತು.
ರಾತ್ರಿ ವೇಳೆ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿ ಇವುನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಕಡೂರು ಸಿಪಿಐ ಶಿವಕುಮಾರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.
ಇದನ್ನೂ ಓದಿ: ಬೈಕ್ಗಳ ಮಧ್ಯೆ ಭೀಕರ ಡಿಕ್ಕಿ.. ಇಬ್ಬರು ಮಕ್ಕಳು ಸೇರಿ ನಾಲ್ವರ ದುರ್ಮರಣ