ನವದೆಹಲಿ: ಪಶ್ಚಿಮ ದೆಹಲಿಯ ಬಿಜೆಪಿ ಮಾಜಿ ಉಪಾಧ್ಯಕ್ಷ ಗುರ್ವಿಂದರ್ ಸಿಂಗ್ ಬಾವಾ (58) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದೆಹಲಿಯಲ್ಲಿರುವ ಇವರ ನಿವಾಸದ ಬಳಿಯ ಪಾರ್ಕ್ನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುರ್ವಿಂದರ್ ಸಿಂಗ್ರ ಈ ನಿರ್ಧಾರಕ್ಕೆ ಕಾರಣ ತಿಳಿದು ಬಂದಿಲ್ಲ. ಯಾವುದೇ ಡೆತ್ ನೋಟ್ ಕೂಡ ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ 10 ವರ್ಷ ಜೈಲು
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಬಾವಾ ಅವರು ದೀರ್ಘಕಾಲದ ವರೆಗೆ ಪಶ್ಚಿಮ ದೆಹಲಿಯ ಬಿಜೆಪಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲೂ ಸ್ಪರ್ಧಿಸಿದ್ದರು.