ETV Bharat / crime

7 ಬಾರಿ ಗರ್ಭಪಾತ.. ಮದುವೆಯಾಗು ಎಂದಿದ್ದಕ್ಕೆ ಪ್ರೇಯಸಿಗೆ ವಿಷವುಣಿಸಿದ ಪ್ರಿಯಕರ - ವಿಷ

ಅನೇಕ ಬಾರಿ ಪ್ರೇಯಸಿ ಜೊತೆ ದೈಹಿಕ ಸಂಪರ್ಕ ಬೆಳೆಸಿ ಇದೀಗ ಮದುವೆಯಾಗು ಎಂದಿದ್ದಕ್ಕೆ ಆಕೆಯನ್ನೇ ಕೊಲೆ ಮಾಡಲು ಪ್ರಿಯಕರ ಯತ್ನಿಸಿದ್ದಾನೆ.

Boyfriend poisons girlfriend after turned down her marriage proposal
ಪ್ರೇಯಸಿಗೆ ವಿಷವುಣಿಸಿದ ಪ್ರಿಯಕರ
author img

By

Published : Jun 25, 2021, 11:21 AM IST

ಗಾಜಿಯಾಬಾದ್: ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದವನಿಗೆ ಮದುವೆಯಾಗು ಎಂದು ಕೇಳಿದ್ದಕ್ಕೆ ಪ್ರಿಯತಮೆಗೆ ಯುವಕ ವಿಷ ಕುಡಿಸಿರುವ ಘಟನೆ ದೆಹಲಿ-ಉತ್ತರ ಪ್ರದೇಶ ಗಡಿಭಾಗವಾದ ಗಾಜಿಯಾಬಾದ್​ನಲ್ಲಿ ನಡೆದಿದೆ. ಇದಕ್ಕೂ ಮುನ್ನ ಆಕೆಗೆ 7 ಬಾರಿ ಗರ್ಭಪಾತ ಮಾಡಿಸಿರುವುದು ಬೆಳಕಿಗೆ ಬಂದಿದೆ.

ಯುವತಿಯ ಸ್ಥಿತಿ ಗಂಭೀರವಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮುಸ್ಸೂರಿ ಠಾಣಾ ಪೊಲೀಸರು ಆಸ್ಪತ್ರೆಗೆ ತೆರಳಿ ಆಕೆಗೆ ಪ್ರಜ್ಞೆ ಬಂದ ಬಳಿಕ ಹೇಳಿಕೆಯನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ. ಯುವತಿಯ ಹೇಳಿಕೆಯ ಮೇರೆಗೆ ಆರೋಪಿಗಾಗಿ ಬಲೆ ಬೀಸಿದ್ದು, ಚಿಕಿತ್ಸೆ ಮುಂದುವರೆದಿದೆ.

ಮದುವೆಯಾಗು ಎಂದಿದ್ದಕ್ಕೆ ಪ್ರೇಯಸಿಗೆ ವಿಷವುಣಿಸಿದ ಪ್ರಿಯಕರ

ಇದನ್ನೂ ಓದಿ: Girl friend ಮೇಲೆ ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರ ಎಸಗಿದ ಬಾಯ್​ಫ್ರೆಂಡ್

ಕಳೆದ 3 ವರ್ಷಗಳ ಕಾಲ ಪರಸ್ಪರ ಇಬ್ಬರೂ ಪ್ರೀತಿಸುತ್ತಿದ್ದು, ಮದುವೆಯಾಗುವುದಾಗಿ ನಂಬಿಸಿ ನನ್ನ ಜೊತೆ ಅನೇಕ ಬಾರಿ ದೈಹಿಕ ಸಂಪರ್ಕ ಹೊಂದಿದ್ದಾನೆ. ಈ ಅವಧಿಯಲ್ಲಿ ಒಟ್ಟು ಏಳು ಬಾರಿ ನಾನು ಗರ್ಭವತಿಯಾಗಿದ್ದು, ಪ್ರತಿ ಬಾರಿ ಗರ್ಭಪಾತ ಮಾಡಿಸಿದ್ದಾನೆ. ಇಷ್ಟೆಲ್ಲಾ ಆದರೂ ಮುಂದೊಂದು ದಿನ ನನ್ನನ್ನು ವಿವಾಹವಾಗುತ್ತಾನೆಂದು ನಾನು ನಂಬಿದ್ದೆ. ಆದರೆ ಕಳೆದ ಕೆಲ ದಿನಗಳಿಂದ ಮದುವೆ ಪ್ರಸ್ತಾಪ ಎತ್ತಿದಾಗಲೆಲ್ಲಾ ಇದಕ್ಕೆ ತಿರಸ್ಕರಿಸಿ ನನಗೆ ಹೊಡೆಯುತ್ತಿದ್ದ. ಇದೀಗ ವಿಷವುಣಿಸಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.