ETV Bharat / crime

ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ FIR ದಾಖಲಿಸಿದ ಸಿಬಿಐ - ಭ್ರಷ್ಟಾಚಾರ ಆರೋಪ

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಸಿಬಿಐ ಎಫ್​ಐಆರ್​ ದಾಖಲಿಸಿದೆ.

Anil Deshmukh
ಅನಿಲ್ ದೇಶ್​ಮುಖ್
author img

By

Published : Apr 24, 2021, 10:20 AM IST

ಮುಂಬೈ: ಭ್ರಷ್ಟಾಚಾರ ಆರೋಪದಡಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಸಿಬಿಐ ಎಫ್​ಐಆರ್​ ದಾಖಲಿಸಿದ್ದು, ಮುಂಬೈನ ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಅನಿಲ್ ದೇಶ್​ಮುಖ್ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್​ ಮಾಡಿದ್ದ ಆರೋಪಗಳ ಪರಿಶೀಲಿಸುವಂತೆ ಬಾಂಬೆ ಹೈಕೋರ್ಟ್‌ ನೀಡಿದ ಆದೇಶದ ಮೇರೆಗೆ ಕೇಂದ್ರ ತನಿಖಾ ದಳವು ಪ್ರಾಥಮಿಕ ತನಿಖೆ ನಡೆಸಿದೆ

ಇದನ್ನೂ ಓದಿ: ಆಂಟಿಲಿಯಾ ಬಾಂಬ್ ಪ್ರಕರಣ: ಏ.28ರ ತನಕ ಸುನಿಲ್ ಮಾನೆಗೆ ನ್ಯಾಯಾಂಗ ಬಂಧನ

ಪ್ರಸ್ತುತ ಮಹಾರಾಷ್ಟ್ರ ಗೃಹರಕ್ಷಕ ದಳದ ಕಮಾಂಡೆಂಟ್ ಜನರಲ್ ಆಗಿ ನೇಮಕಗೊಂಡಿರುವ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಅನಿಲ್ ದೇಶ್​ಮುಖ್​ ವಿರುದ್ಧ ಗಂಭೀರ ಭ್ರಷ್ಟಾಚಾರ ಆರೋಪ ಮಾಡಿದ್ದರು. ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಬರೆದು, ಅಮಾನತುಗೊಂಡ ಎಪಿಐ ಸಚಿನ್​ ವಾಜೆ ಅವರಿಗೆ ಪ್ರತಿ ತಿಂಗಳು 100 ಕೋಟಿ ರೂ. ಹಫ್ತಾ ವಸೂಲಿ ಮಾಡುವಂತೆ ಅನಿಲ್ ದೇಶ್​ಮುಖ್ ಹೇಳಿದ್ದರು ಎಂದು ಆರೋಪಿಸಿದ್ದರು.

ಇದರ ವಿಚಾರಣೆ ನಡೆಸಿದ್ದ ಬಾಂಬೆ ಹೈಕೋರ್ಟ್​​ ಸಿಬಿಐ ತನಿಖೆಗೆ ಆದೇಶ ನೀಡಿದ ಬೆನ್ನಲ್ಲೇ ತಮ್ಮ ಗೃಹ ಸಚಿವ ಸ್ಥಾನಕ್ಕೆ ಅನಿಲ್ ದೇಶ್​ಮುಖ್​ ರಾಜೀನಾಮೆ ನೀಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.