ನೆಲಮಂಗಲ(ಬೆಂ.ಗ್ರಾಮಾಂತರ): ಕೆರೆಯಲ್ಲಿ ಈಜಲು ಹೋಗಿದ್ದ ಅಣ್ಣ-ತಮ್ಮ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಇಂದು ಸಹೋದರರ ಶವಗಳು ಕೆರೆಯಲ್ಲಿ ಪತ್ತೆಯಾಗಿವೆ.
13 ವರ್ಷದ ಏಕಾಕ್ಷ ಹಾಗೂ 11 ವರ್ಷದ ಭರತ್ ಕುಮಾರ್ ಮೃತ ದುರ್ದೈವಿಗಳು. ಈಜು ಬಾರದೆ ಇದ್ದರೂ ಈ ಇಬ್ಬರೂ ನಿನ್ನೆ ಕೆರೆಯಲ್ಲಿ ಈಜಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ನೀರುಪಾಲದವರಿಗಾಗಿ ನಿನ್ನೆ ಹುಡುಕಾಟ ನಡೆಸಲಾಗಿತ್ತು. ಆದರೆ ಕತ್ತಲಾದ ಕಾರಣ ಹುಡುಕಾಟ ನಿಲ್ಲಿಸಲಾಗಿತ್ತು. ಇಂದು ಮುಂಜಾನೆ ಶವಗಳು ಪತ್ತೆಯಾಗಿವೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ತುಮಕೂರು: ಅತ್ಯಾಚಾರ-ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಇಬ್ಬರು ಅರೆಸ್ಟ್